ಅಭಿಪ್ರಾಯ / ಸಲಹೆಗಳು

 

1. ಬಾಗೇಪಲ್ಲಿ ಪೊಲೀಸ್ ಠಾಣೆ ಮೊ.ಸಂ.149/2021 ಕಲಂ.457,380 ಐ.ಪಿ.ಸಿ :-

          ದಿನಾಂಕ 02/06/2021 ರಂದು ಸಂಜೆ 18-30 ಗಂಟೆಗೆ ಫಿರ್ಯಾದಿದಾರರಾದ ಶ್ರೀಮತಿ ನಿರ್ಮಲಮ್ಮ. ಸಿ.ಎಸ್. ಬಿನ್ ಡಿ.ಆರ್. ರಮೇಶ್, 36 ವರ್ಷ, ಬೋವಿ ಜನಾಂಗ, ಅಂಗನವಾಡಿ ಕಾರ್ಯಕರ್ತೆ, ಗುರ್ರಾಲದಿನ್ನೆ ಗ್ರಾಮ, ವಾಸ ನ್ಯಾಷನಲ್ ಕಾಲೇಜ್ ಬಳಿ, 5ನೇ ವಾರ್ಡ, ಬಾಗೇಪಲ್ಲಿ ತಾಲ್ಲೂಕು. ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೆನೆಂದರೆ ನಾನು  ಈಗ್ಗೆ 15 ವರ್ಷಗಳಿಂದ ಬಾಗೇಪಲ್ಲಿ ತಾಲ್ಲೂಕು, ಯಲ್ಲಂಪಲ್ಲಿ ಪಂಚಾಯ್ತಿ, ಗುರ್ರಾಲದಿನ್ನೆ ಗ್ರಾಮ ಅಂಗನವಾಡಿ ಕೇಂದ್ರ ದಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡಿಕೊಂಡಿರುತ್ತಾನೆ. ದಿನಾಂಕ 16/04/2021 ರಂದು ಬಾಗೇಪಲ್ಲಿ ಸಿ.ಡಿ.ಪಿ.ಓ  ಕಛೇರಿಯಿಂದ ಅಂಗನವಾಡಿ ಕೇಂದ್ರಕ್ಕೆ ಒಂದು 10 ಲೀಟರ್ ಕುಕ್ಕರ್ ಮತ್ತು ಮೊಟ್ಟೆ ಬೇಯಿಸುವ ನಾನ್ ಸ್ಟೀಕ್ ಪಾತ್ರೆಯನ್ನು ನೀಡಿರುತ್ತಾರೆ. ಅದನ್ನು ಅದೇ ದಿನ ಅಂಗನವಾಡಿ ಕೇಂದ್ರದಲ್ಲಿ ಇಟ್ಟು ಬಾಗಿಲಿಗೆ ಬೀಗ ಹಾಕಿಕೊಂಡು ಬಂದಿರುತ್ತೇನೆ. ನಂತರ ದಿನಾಂಕ.17/04/2021 ರಂದು ಬೆಳಿಗ್ಗೆ 9-30 ಗಂಟೆಗೆ ಅಂಗನವಾಡಿ ಕೇಂದ್ರಕ್ಕೆ ಹೋಗಿ ನೋಡಲಾಗಿ ಯಾರೋ ಕಳ್ಳರು ಅಂಗನವಾಡಿ ಕೇಂದ್ರದ ಕಬ್ಬಿಣ ಬೀಗವನ್ನು ಯಾವುದೋ ಆಯುಧದಿಂದ ಹೊಡೆದು ಹಾಕಿ ಒಳಗೆ ಇಟ್ಟಿದ್ದ 10 ಲೀಟರ್ ಕುಕ್ಕರ್ ಮತ್ತು ಮೊಟ್ಟೆ ಬೇಯಿಸುವ ಪಾತ್ರೆಯನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಇದರ ಬೆಲೆ 5,000/- ರೂಗಳಾಗಿರುತ್ತೆ. ನಾವು ಎಲ್ಲ ಕಡೆ ಹುಡುಕಾಡಿ, ಮೇಲಾಧಿಕಾರಿಗಳಿಗೆ ತಿಳಿಸಿ ಈ ದಿನ ತಡವಾಗಿ ಬಂದು ದೂರನ್ನು ನೀಡುತ್ತಿದ್ದು ಮೇಲ್ಕಂಡ ವಸ್ತುಗಳನ್ನು ಪತ್ತೆ ಮಾಡಿಕೊಡಬೇಕಾಗಿ ಕೋರಿ ನೀಡಿದ ದೂರಾಗಿರುತ್ತೆ.

 

2. ಚೇಳೂರು ಪೊಲೀಸ್ ಠಾಣೆ ಮೊ.ಸಂ.54/2021 ಕಲಂ. 188,269,270  ಐ.ಪಿ.ಸಿ & 51(b) THE DISASTER MANAGEMENT ACT, 2005  :-

          ದಿನಾಂಕ  02-06-2021 ರಂದು ಬೆಳಿಗ್ಗೆ  11:30 ಗಂಟೆಗೆ ಸಿ .ಹೆಚ್.ಸಿ-149 ರವರು ಠಾಣೆಗೆ ಹಾಜರಾಗಿ ನೀಡಿದ ವರದಿಯ ಸಾರಾಂಶವೆನೆಂದರೆ  ಈ ದಿನ ನಾನು ಮತ್ತು ಹೆಚ್.ಜಿ-585 ನರಸಿಂಹ ಮೂರ್ತಿ ರವರೊಂದಿಗೆ ದಿನಾಂಕ:02-06-2021 ರಂದು ಚೇಳೂರು  ಗ್ರಾಮದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಗಸ್ತು ಕರ್ತವ್ಯ ನಿರ್ವಹಿಸಿಕೊಂಡು ಎಲ್ಲಾ ಅಂಗಡಿಯವರಿಗೆ ಮತ್ತು ಸಾರ್ವಜನಿಕರಿಗೆ ಕೋವಿಡ್-19 ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು, ಬೆಳಿಗ್ಗೆ 06-00 ಗಂಟೆಯಿಂದ 10-00 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಮಾತ್ರ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಪಾಲಿಸಲು ಹಾಗೂ ಪ್ರತಿಯೊಬ್ಬರು ಮಾಸ್ಕ್ ಧರಿಸುವಂತೆ ಹಾಗೂ ಒಬ್ಬರಿಂದ ಒಬ್ಬರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ನಿಂತುಕೊಳ್ಳಲು ಅಂಗಡಿಗಳ ಮುಂದೆ ಬಾಕ್ಸ್ ಅನ್ನು ಹಾಕಿ ಸದರಿ ಬಾಕ್ಸ್ ಗಳಲ್ಲಿ ನಿಂತುಕೊಂಡು ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸೂಚನೆಗಳನ್ನು ನೀಡಿ 10:00 ಗಂಟೆಯ ನಂತರ  ಅಂಗಡಿಗಳನ್ನು ಬಂದ್ ಮಾಡಿಸಿಕೊಂಡು ನಿಮ್ಮಾಕಾಯಲಪಲ್ಲಿ ಕಡೆ ಗಸ್ತಿಗೆ ಹೋದಾಗ  ಬೆಳಗ್ಗೆ 11-00 ಗಂಟೆ ಸಮಯದಲ್ಲಿ  ದೊರವಾರಪಲ್ಲಿ  ಬಳಿ ಪಂಚರ್ ಅಂಗಡಿಯನ್ನು ತೆರೆದು ಯಾವುದೋ ವಾಹನಕ್ಕೆ ಪಂಚರ್ ಹಾಕುತ್ತಿದ್ದು   ಸದರಿ ಪಂಚರ್ ಅಂಗಡಿಯವರು ಕೋವಿಡ್-19 ರೋಗ ತಡೆಗಟ್ಟುವ ನಿಟ್ಟಿನಲ್ಲಿ  ಸಕರ್ಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡದೇ ಇರುವುದು ಕಂಡು ಬಂದಿದ್ದು ಸದರಿ ಪಂಚರ್ ಅಂಗಡಿಯಲ್ಲಿ ಪಂಚರ್ ಹಾಕುತ್ತಿದ್ದವನ  ಹೆಸರು & ವಿಳಾಸ ಕೇಳಲಾಗಿ  ರಮೇಶ್ ಬಿನ್ ವೆಂಕಟರಾಮ ರೆಡ್ಡಿ , 36ವರ್ಷ,ವಕ್ಕಲಿಗರು , ದೊರವಾರಪಲ್ಲಿ  ಗ್ರಾಮ, ಬಾಗೇಪಲ್ಲಿ ತಾಲ್ಲೂಕು ಎಂತ ತಿಳಿಸಿದ್ದು, ಸದರಿಯವರು 10:00 ಗಂಟೆಯ ನಂತರ ಪಂಚರ್  ಅಂಗಡಿ ತೆರೆಯಲು ಅವಕಾಶ ಇಲ್ಲದೇ ಇದ್ದರೂ ಸಹ ಸಕರ್ಾರದ ಆದೇಶಗಳನ್ನು ಉಲ್ಲಂಘನೆ ಮಾಡಿದ್ದು, ಕೋವಿಡ್-19 ರೋಗ ತಡೆಗಟ್ಟುವ ಬಗ್ಗೆ ಯಾವುದೇ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೇ ಕೋವಿಡ್-19 ಹಿನ್ನೆಲೆಯಲ್ಲಿ ಸಕರ್ಾರ ಹೊರಡಿಸಿರುವ ಆದೇಶಗಳನ್ನು ಉಲ್ಲಂಘನೆ ಮಾಡಿ ಪ್ರಾಣಕ್ಕೆ ಅಪಾಯಕಾರಿಯಾದ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡುವ ಸಂಭವವಿರುವುದೆಂದು ತಿಳಿದಿದ್ದರೂ ಸಹ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತನ ತೋರ್ಪಡಿಸಿರುವುದು ಕಂಡುಬಂದಿದ್ದು, ಸದರಿ ಪಂಚರ್  ಅಂಗಡಿಯ ಮಾಲೀಕರಾದ ರಮೇಶ್ ಬಿನ್ ವೆಂಕಟರಾಮ ರೆಡ್ಡಿ, ರವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲು ಕೋರಿ ನೀಡಿದ  ವರದಿಯನ್ನು   ಪಡೆದು ಠಾಣಾ ಮೊ.ಸಂ.54/2021 ಕಲಂ:188,269,270, ಐಪಿಸಿ ಮತ್ತು 51(ಬಿ) ಡಿ.ಎಂ.ಆಕ್ಟ್ ರೀತ್ಯ ಪ್ರಕರಣವನ್ನು ದಾಖಲಿಸಿತ್ತೆ.

 

3. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ.255/2021 ಕಲಂ. 188,269,270  ಐ.ಪಿ.ಸಿ & 51(b) THE DISASTER MANAGEMENT ACT, 2005  :-

          ದಿನಾಂಕ: 02/06/2021 ರಂದು ಮದ್ಯಾಹ್ನ 2.30 ಗಂಟೆಗೆ ಠಾಣೆಯ ಶ್ರೀ ನರಸಿಂಹಮೂರ್ತಿ, ಸಿ.ಹೆಚ್.ಸಿ-124 ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಈ ದಿನ ದಿನಾಂಕ: 02/06/2021 ರಂದು ಮದ್ಯಾಹ್ನ 1.00 ಗಂಟೆ ಸಮಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ತಾನು ಮತ್ತು ಸಿ.ಪಿ.ಸಿ-504 ಸತೀಶ ರವರು ಠಾಣಾ ಸರಹದ್ದಿನಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕುರುಟಹಳ್ಳಿ ಗ್ರಾಮದ ಮಹಬೂಬ್ ಪಾಷ ಬಿನ್ ಲೇಟ್ ಜಲೀಲ್ ಸಾಬ್ ರವರು ಅವರ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವುದಾಗಿ ಮಾಹಿತಿ ಬಂದಿದ್ದು ಅದರಂತೆ ತಾವು ಮದ್ಯಾಹ್ನ 1.15 ಗಂಟೆಗೆ ಕುರುಟಹಳ್ಳಿ ಗ್ರಾಮದ ಮಹಬೂಬ್ ಪಾಷ ರವರ ಚಿಲ್ಲರೆ ಅಂಗಡಿಯ ಬಳಿ ಹೋದಾಗ ಸದರಿ ಅಂಗಡಿಯಲ್ಲಿ ಅದರ ಮಾಲೀಕರು ಸರ್ಕಾರದ ಕೋವಿಡ್-19 ಸಾಂಕ್ರಾಮಿಕ ರೋಗದ ಸಂಬಂಧ ಇರುವ ಆದೇಶಗಳನ್ನು ಪಾಲಿಸದೇ, ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್ ರೋಗಾಣು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹಾ ಕಾನೂನು ಬಾಹಿರವಾಗಿ ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು, ಸದರಿ ಅಂಗಡಿಯ ಮಾಲೀಕರ ಹೆಸರು ಮತ್ತು ವಿಳಾಸವನ್ನು ಕೇಳಲಾಗಿ ಮಹಬೂಬ್ ಪಾಷ ಬಿನ್ ಲೇಟ್ ಜಲೀಲ್ ಸಾಬ್, 35 ವರ್ಷ, ಮುಸ್ಲಿಂ ಜನಾಂಗ, ಚಿಲ್ಲರೆ ಅಂಗಡಿ ಮಾಲೀಕರು, ವಾಸ: ಕುರುಟಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು ಎಂತ ತಿಳಿಸಿದ್ದು, ಆದ ಕಾರಣ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ, ಅಂತರ ಕಾಯ್ದುಕೊಳ್ಳದೇ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಸದರಿ ಚಿಲ್ಲರೆ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಕೋರಿರುವುದಾಗಿರುತ್ತೆ.

 

4. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ಮೊ.ಸಂ.256/2021 ಕಲಂ. 188,269,270  ಐ.ಪಿ.ಸಿ & 51(b) THE DISASTER MANAGEMENT ACT, 2005  :-

          ದಿನಾಂಕ: 02/06/2021 ರಂದು ಮದ್ಯಾಹ್ನ 3.30 ಗಂಟೆಗೆ ಠಾಣೆಯ ಶ್ರೀ ಕೃಷ್ಣಪ್ಪ, ಎ.ಎಸ್.ಐ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಈ ದಿನ ದಿನಾಂಕ: 02/06/2021 ರಂದು ಮದ್ಯಾಹ್ನ 2.00 ಗಂಟೆ ಸಮಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ತಾನು ಮತ್ತು ಸಿ.ಪಿ.ಸಿ-504 ಸತೀಶ ರವರು ಠಾಣಾ ಸರಹದ್ದಿನಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾಂಪುರ ಗ್ರಾಮದ ವೆಂಕಟರವಣಪ್ಪ ಬಿನ್ ಲೇಟ್ ವೆಂಕಟಸ್ವಾಮಿ ರವರು ಅವರ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವುದಾಗಿ ಮಾಹಿತಿ ಬಂದಿದ್ದು ಅದರಂತೆ ತಾವು ಮದ್ಯಾಹ್ನ 2.15 ಗಂಟೆಗೆ ರಾಂಪುರ ಗ್ರಾಮದ ವೆಂಕಟರವಣಪ್ಪ ರವರ ಚಿಲ್ಲರೆ ಅಂಗಡಿಯ ಬಳಿ ಹೋದಾಗ ಸದರಿ ಅಂಗಡಿಯಲ್ಲಿ ಅದರ ಮಾಲೀಕರು ಸರ್ಕಾರದ ಕೋವಿಡ್-19 ಸಾಂಕ್ರಾಮಿಕ ರೋಗದ ಸಂಬಂಧ ಇರುವ ಆದೇಶಗಳನ್ನು ಪಾಲಿಸದೇ, ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್ ರೋಗಾಣು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹಾ ಕಾನೂನು ಬಾಹಿರವಾಗಿ ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು, ಸದರಿ ಅಂಗಡಿಯ ಮಾಲೀಕರ ಹೆಸರು ಮತ್ತು ವಿಳಾಸವನ್ನು ಕೇಳಲಾಗಿ ವೆಂಕಟರವಣಪ್ಪ ಬಿನ್ ಲೇಟ್ ವೆಂಕಟಸ್ವಾಮಿ, 60 ವರ್ಷ, ಭೋವಿ ಜನಾಂಗ, ಚಿಲ್ಲರೆ ಅಂಗಡಿ ಮಾಲೀಕರು, ವಾಸ: ರಾಂಪುರ ಗ್ರಾಮ, ಚಿಂತಾಮಣಿ ತಾಲ್ಲೂಕು ಎಂತ ತಿಳಿಸಿದ್ದು, ಆದ ಕಾರಣ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ, ಅಂತರ ಕಾಯ್ದುಕೊಳ್ಳದೇ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಸದರಿ ಚಿಲ್ಲರೆ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಕೋರಿರುವುದಾಗಿರುತ್ತೆ.

 

5. ಚಿಂತಾಮಣಿ ನಗರ ಪೊಲೀಸ್ ಠಾಣೆ ಮೊ.ಸಂ.95/2021 ಕಲಂ. 188 ಐ.ಪಿ.ಸಿ & 51(b) THE DISASTER MANAGEMENT ACT, 2005  :-

          ಪಿರ್ಯಾದಿದಾರರಾದ ಆನಂದ್ ಕುಮಾರ್ ಜೆ.ಎನ್ ಪಿಐ ಚಿಂತಾಮಣಿ ನಗರ ಪೊಲೀಸ್ ಠಾಣೆ ರವರು ಠಾಣೆಗೆ ಹಾಜರಾಗಿ ನೀಡಿದ ವರದಿಯ ಸಾರಾಂಶವೆನೆಂದರೆ ದಿನಾಂಕ:02/06/2021 ರಂದು ಬೆಳಿಗ್ಗೆ  ನಾನು ಮತ್ತು ಠಾಣಾ  ಸಿಬ್ಬಂದಿ ಸಿ.ಪಿ.ಸಿ-426 ಸರ್ವೇಶ್ ರವರೊಂದಿಗೆ ಠಾಣೆಗೆ ಒದಗಿಸಿರುವ ಜೀಪ್ ಸಂಖ್ಯೆ ಕೆಎ-40-ಜಿ-3699 ರಲ್ಲಿ ಚಿಂತಾಮಣಿ ನಗರ ಗಸ್ತಿನಲ್ಲಿದ್ದಾಗ ಬೆಳಿಗ್ಗೆ 09-30 ಗಂಟೆ ಸಮಯದಲ್ಲಿ ಚಿಂತಾಮಣಿ ನಗರದ ಎಂ.ಜಿ ರಸ್ತೆಯಲ್ಲಿ ಗಸ್ತು ಮಾಡುತ್ತಿದ್ದಾಗ ರಸ್ತೆಯ ಗಜಾನನ ವೃತ್ತದ ಬಳಿಯಿರುವ ಗಜಾನನ ಸ್ಟೋರ್ಸ್ ಅಂಗಡಿಯ ಮಾಲೀಕರು ಸರ್ಕಾರದ ಕೋವಿಡ್-19 ಆದೇಶಗಳನ್ನು ಪಾಲಿಸದೇ, ಲಾಕ್ ಡೌನ್ ಆದೇಶ ಹೊರಡಿಸಿದ್ದರೂ ಸಹ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ವ್ಯಾಪಾರ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ ಪಂಚರೊಂದಿಗೆ ಹೋಗಿ ನೋಡಲಾಗಿ ಸದರಿ ಅಂಗಡಿಯ ಮಾಲೀಕರು ಸರ್ಕಾರದ ಕೋವಿಡ್-19 ಆದೇಶಗಳನ್ನು ಪಾಲಿಸದೇ, ಲಾಕ್ ಡೌನ್ ಆದೇಶ ಹೊರಡಿಸಿದ್ದರೂ ಸಹ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ವ್ಯಾಪಾರ ಮಾಡುತ್ತಿದ್ದು, ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಒಬ್ಬರಿಗೊಬ್ಬರು ಅಕ್ಕ ಪಕ್ಕದಲ್ಲಿಯೇ ನಿಲ್ಲಿಸಿಕೊಂಡು ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿದ್ದು, ನಂತರ ಪಂಚರ ಸಮಕ್ಷಮ ಸದರಿ  ಅಂಗಡಿಯ ಮಾಲೀಕನ  ಹೆಸರು ಮತ್ತು ವಿಳಾಸ ಕೇಳಲಾಗಿ ತನ್ನ ಹೆಸರು ಶಶಾಂಕ್ ಬಿನ್ ಶ್ರೀನಾಥ್ ಎನ್.ಬಿ, 40 ವರ್ಷ, ಗಜಾನನ ಸ್ಟೋರ್ಸ್, ಗಜಾನನ ವೃತ್ತ, ಚಿಂತಾಮಣಿ ನಗರ ಎಂದು ತಿಳಿಸಿದ್ದು ಈ ಬಗ್ಗೆ ಪಂಚನಾಮೆಯನ್ನು ಜರುಗಿಸಿರುತ್ತೆ. ಆದ್ದರಿಂದ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ ಅಂಗಡಿಯ ಬಳಿ ಸಾಮಾಜಿಕ ಅಂತರವನ್ನು ಪಾಲಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ ಸದರಿ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಜರುಗಿಸಲು ನೀಡಿದ ವರದಿಯ ಮೇರೆಗೆ ಪ್ರಕರಣ ದಾಖಲಿಸಿರುತ್ತೆ.

 

6. ಚಿಂತಾಮಣಿ ನಗರ ಪೊಲೀಸ್ ಠಾಣೆ ಮೊ.ಸಂ.96/2021 ಕಲಂ. 188 ಐ.ಪಿ.ಸಿ & 51(b) THE DISASTER MANAGEMENT ACT, 2005  :-

          ಪಿರ್ಯಾದಿದಾರರಾದ ನಾರಾಯಣಸ್ವಾಮಿ ಆರ್ ಪಿ ಎಸ್ ಐ -1 ಚಿಂತಾಮಣಿ ನಗರ ಪೊಲೀಸ್ ಠಾಣೆ ರವರು ಠಾಣೆಗೆ ಹಾಜರಾಗಿ ನೀಡಿದ ವರದಿಯ ಸಾರಾಂಶವೆನೆಂದರೆ ದಿನಾಂಕ:02/06/2021 ರಂದು ಬೆಳಿಗ್ಗೆ  ನಾನು ಮತ್ತು ಠಾಣಾ  ಸಿಬ್ಬಂದಿ ಸಿ.ಪಿ.ಸಿ-236 ಸಂಜಯ್ ಕುಮಾರ್ ರವರೊಂದಿಗೆ ಠಾಣೆಗೆ  ಒದಗಿಸಿರುವ ಜೀಪ್ ಸಂಖ್ಯೆ ಕೆಎ-40-ಜಿ-138  ರಲ್ಲಿ ಚಿಂತಾಮಣಿ ನಗರ ಗಸ್ತಿನಲ್ಲಿದ್ದಾಗ ಬೆಳಿಗ್ಗೆ 09-45 ಗಂಟೆ ಸಮಯದಲ್ಲಿ ಚಿಂತಾಮಣಿ ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಪಯೋನಿಧಿ ಪೈಂಟ್ಸ್ & ಹಾರ್ಡ್ ವೇರ್ ಅಂಗಡಿಯ ಮಾಲೀಕರು ಸರ್ಕಾರದ ಕೋವಿಡ್-19 ಆದೇಶಗಳನ್ನು ಪಾಲಿಸದೇ, ಲಾಕ್ ಡೌನ್ ಆದೇಶ ಹೊರಡಿಸಿದ್ದರೂ ಸಹ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ವ್ಯಾಪಾರ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ ಪಂಚರೊಂದಿಗೆ ಹೋಗಿ ನೋಡಲಾಗಿ ಸದರಿ ಅಂಗಡಿಯ ಮಾಲೀಕರು ಸರ್ಕಾರದ ಕೋವಿಡ್-19 ಆದೇಶಗಳನ್ನು ಪಾಲಿಸದೇ, ಲಾಕ್ ಡೌನ್ ಆದೇಶ ಹೊರಡಿಸಿದ್ದರೂ ಸಹ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿ ವ್ಯಾಪಾರ ಮಾಡುತ್ತಿದ್ದು, ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಒಬ್ಬರಿಗೊಬ್ಬರು ಅಕ್ಕ ಪಕ್ಕದಲ್ಲಿಯೇ ನಿಲ್ಲಿಸಿಕೊಂಡು ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿದ್ದು, ನಂತರ ಪಂಚರ ಸಮಕ್ಷಮ ಸದರಿ ಅಂಗಡಿಯ ಮಾಲೀಕನ  ಹೆಸರು ಮತ್ತು ವಿಳಾಸ ಕೇಳಲಾಗಿ ತನ್ನ ಹೆಸರು ಶಿವಣ್ಣ ಬಿನ್ ದಾಸಪ್ಪ, 45 ವರ್ಷ, ಎಸ್.ಸಿ ಜನಾಂಗ, ಕೋನಪಲ್ಲಿ ಗ್ರಾಮ, ಚಿಂತಾಮಣಿ ತಾಲ್ಲೂಕು ಎಂದು ತಿಳಿಸಿದ್ದು ಈ ಬಗ್ಗೆ ಪಂಚನಾಮೆಯನ್ನು ಜರುಗಿಸಿರುತ್ತೆ. ಆದ್ದರಿಂದ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ ಅಂಗಡಿಯ ಬಳಿ ಸಾಮಾಜಿಕ ಅಂತರವನ್ನು ಪಾಲಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ ಸದರಿ ಎಸ್.ಎನ್.ಎಸ್. ಸ್ಟೋರ್ಸ್ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಜರುಗಿಸಲು ನೀಡಿದ ವರದಿಯನ್ನು ಪಡೆದು ಪ್ರಕರಣ ದಾಖಲಿಸಿರುತ್ತೆ.

 

7. ಪಾತಪಾಳ್ಯ ಪೊಲೀಸ್ ಠಾಣೆ ಮೊ.ಸಂ.49/2021 ಕಲಂ. 279,337 ಐ.ಪಿ.ಸಿ :-

          ದಿನಾಂಕ: 03-06-2021 ರಂದು ಹೆಚ್.ಸಿ-250 ರವರು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳು ಶಿವಾರೆಡ್ಡಿ.ಡಿ.ಎಸ್ ರವರ ಹೇಳಿಕೆ ಪಡೆದು ಬೆಳಿಗ್ಗೆ 10-30 ಗಂಟೆಗೆ ಠಾಣೆಗೆ ವಾಪಸ್ಸಾಗಿ ಹೇಳಿಕೆ ದೂರನ್ನು ಹಾಜರುಪಡಿಸಿದ್ದು, ಪರಿಶೀಲಿಸಿ ದಾಖಲಿಸಿದ ದೂರಿನ ಸಾರಾಂಶವೇನೆಂದರೆ, ಗಾಯಾಳು ಶಿವಾರೆಡ್ಡಿ ರವರು ಈ ದಿನ ದಿನಾಂಕ: 03-06-2021 ರಂದು ತನ್ನ ತಂಗಿ ಮಮತಾ ಕೋಂ ನಾಗೇಂದ್ರರೆಡ್ಡಿ ರವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ತಮ್ಮ ಗ್ರಾಮದಿಂದ KA-40-U-6317 Hero HF Deluxe ದ್ವಿಚಕ್ರವಾಹನದಲ್ಲಿ ತನ್ನ ತಂಗಿಯನ್ನು ಕುಳ್ಳರಿಸಿಕೊಂಡು ಬಾಗೇಪಲ್ಲಿಗೆ ಬರುತ್ತಿದ್ದಾಗ ಬೆಳಿಗ್ಗೆ ಸುಮಾರು 08-00 ಗಂಟೆಯಲ್ಲಿ ಘಂಟ್ಲಮಲ್ಲಮ್ಮನ ಕಣಿಯಯ ನರ್ಸರಿ ಬಳಿ ಬಾಗೇಪಲ್ಲಿ ಕಡೆಯಿಂದ ಬಂದ KA-51-Z-3921 ಕಾರನ್ನು ಅದರ ಚಾಲಕ ಅತಿವೇಗ & ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ತಮ್ಮ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತಪಡಿಸಿದ್ದರ ಪರಿಣಾಮ ತನ್ನ ಬಲಗಾಲಿಗೆ ರಕ್ತಗಾಯವಾಗಿರುವುದಾಗಿ ಹಿಂಬದಿ ಕುಳಿತಿದ್ದ ಮಮ ರವರ ಬಲಗೈಗೆ ತರಚಿದ ಗಾಯಗಳಾಗಿರುವುದಾಗಿ ತಮ್ಮನ್ನು ಕುರಪ್ಪಲ್ಲಿ ಶಿವಾರೆಡ್ಡಿ ಎಂಬುವವರು ಉಪಚರಿಸಿ 108 ಆಂಬ್ಯುಲೆನ್ಸ್ ವಾಹನದಲ್ಲಿ ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವುದಾಗಿ ಮೇಲ್ಕಂಡ KA-51-Z-3921 ಕಾರು ಚಾಲಕನ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲು ಕೋರಿ ಪಿರ್ಯಾದು.

 

8. ಪಾತಪಾಳ್ಯ ಪೊಲೀಸ್ ಠಾಣೆ ಮೊ.ಸಂ.50/2021 ಕಲಂ. 188,269,270 ಐ.ಪಿ.ಸಿ & 51(b) THE DISASTER MANAGEMENT ACT, 2005  :-

          ದಿನಾಂಕ:03-06-2021 ರಂದು ಬೆಳಿಗ್ಗೆ 11-15 ಗಂಟೆಯಲ್ಲಿ ಪಿರ್ಯಾದುದಾರರು ಠಾಣೆಗೆ ಹಾಜರಾಗಿ ನೀಡಿದ ವರದಿಯನ್ನು ಪಡೆದು ದಾಖಲಿಸಿದ ವರದಿ ಸಾರಾಂಶ ವೇನೆಂದರೆ, ಕೋವಿಡ್-19 ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾನ್ಯ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ದಿನಾಂಕ:03-06-2021 ರಿಂದ ದಿ:06-06-2021 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ದಿನ ದಿನಾಂಕ:03-06-2021 ರಂದು ಪಾತಪಾಳ್ಯ ಠಾಣೆಯ ಪಿ.ಎಸ್.ಐ ರವರು ತನಗೆ ಜೂಲಪಾಳ್ಯ ಗ್ರಾಮದಲ್ಲಿ ಬಂದೋಬಸ್ತ್ ಕರ್ತವ್ಯಕ್ಕೆ ನೇಮಕ ಮಾಡಿದ್ದು, ನೇಮಕದಂತೆ ನಾನು ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಪಾಲಿಸಲು ಸೂಚಿಸುತ್ತಿರುವಾಗ ಬೆಳಿಗ್ಗೆ 10-00 ಗಂಟೆಯಲ್ಲಿ ಜೂಲಪಾಳ್ಯ ಗ್ರಾಮದಲ್ಲಿ ಒಂದು ಚಿಲ್ಲರೆ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿದ್ದು, ನಾನು ಸ್ಥಳಕ್ಕೆ ಹೋಗಿ ನೋಡಲಾಗಿ  ಸ್ಥಳದಲ್ಲಿದ್ದ ಸಾರ್ವಜನಿಕರು ಓಡಿ ಹೋಗಿದ್ದು, ಸದರಿ ಚಿಲ್ಲರೆ ಅಂಗಡಿಯವರು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಚಿಲ್ಲರೆ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದು, ಸದರಿ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಮಾಲೀಕರ ಹೆಸರು & ವಿಳಾಸ ಕೇಳಲಾಗಿ ವೆಂಕಟೇಶ ಬಿನ್ ವೆಂಕಟರವಣಪ್ಪ, 35 ವರ್ಷ, ಪರಿಶಿಷ್ಟ ಜಾತಿ, ಚಿಲ್ಲರೆ ಅಂಗಡಿ ವ್ಯಾಪಾರ, ವಾಸ: ಜೂಲಪಾಳ್ಯ ಗ್ರಾಮ, ಬಾಗೇಪಲ್ಲಿ ತಾಲ್ಲೂಕು ಎಂತ ತಿಳಿಸಿದ್ದು, ಸದರಿಯವರು ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಉಲ್ಲಂಘನೆ ಮಾಡಿ ಪ್ರಾಣಕ್ಕೆ ಅಪಾಯಕಾರಿಯಾದ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡುವ ಸಂಭವವಿರುವುದೆಂದು ತಿಳಿದಿದ್ದರೂ ಸಹ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತನ ತೋರ್ಪಡಿಸಿರುವುರಿಂದ ಸೂಕ್ತ ಕಾನೂನು ಕ್ರಮ ಜರುಗಿಸಲು ಕೋರಿ.

         

ಇತ್ತೀಚಿನ ನವೀಕರಣ​ : 03-06-2021 05:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080