ಅಭಿಪ್ರಾಯ / ಸಲಹೆಗಳು

 

1. ಬಾಗೇಪಲ್ಲಿ ಪೊಲೀಸ್‌ ಠಾಣೆ ಮೊ.ಸಂ.140/2021 ಕಲಂ. 32,34 ಕೆ.ಇ ಆಕ್ಟ್:-

          ದಿನಾಂಕ: 18/05/2021 ರಂದು ಬೆಳಿಗ್ಗೆ 10-30 ಗಂಟೆಗೆ ಶ್ರೀ ಜಯರಾಂ ಸಹಾಯಕ ಪೊಲೀಸ್ ಉಪ-ನಿರೀಕ್ಷಕರು, ಬಾಗೇಪಲ್ಲಿ ಪೊಲೀಸ್ ಠಾಣೆ ರವರು ಮಾಲು ಮತ್ತು ಅಸಲು ಪಂಚನಾಮೆಯೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ವರದಿಯ ಸಾರಾಂಶವೇನೆಂದರೆ ಈ ದಿನ ದಿನಾಂಕ; 18-05-2021 ರಂದು ಠಾಣಾಧಿಕಾರಿಗಳು ನನಗೆ ಹಗಲು ಗಸ್ತು ಕರ್ತವ್ಯಕ್ಕೆ  ನೇಮಿಸಿದ್ದು ಅದರಂತೆ ನಾನು ಬಾಗೇಪಲ್ಲಿ ಪುರದಲ್ಲಿ ಗಸ್ತು ಮಾಡಿಕೊಂಡು  ಬೆಳಿಗ್ಗೆ 8-30 ಗಂಟೆಯಲ್ಲಿ  ನ್ಯಾಷನಲ್ ಕಾಲೇಜ್ ಬಳಿ ಇರುವಾಗ ಬಾತ್ಮಿದಾರರು ಪೋನ್ ಮಾಡಿ ನಾಗೇಶ ನಾಯ್ಕ ಬಿನ್ ರವಿ ನಾಯ್ಕ, 28 ವರ್ಷ, ಲಂಬಾಣಿ ಜನಾಂಗ, ವಾಸ ಸದ್ದುಪಲ್ಲಿ ತಾಂಡ ಗ್ರಾಮ ಬಾಗೇಪಲ್ಲಿ ತಾಲ್ಲೂಕು ಎಂಬುವವರು ಅಕ್ರಮವಾಗಿ  ಮದ್ಯವನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ  ಖಚಿತ ಮಾಹಿತಿ ಬಂದಿದ್ದು,  ನಾನು ಮತ್ತು ಪಿಸಿ-276 ಸಾಗರ್ ರವರು  ದ್ವಿ ಚಕ್ರ ವಾಹನದಲ್ಲಿ ಹೊರಟು ಗೂಳೂರು ಬಸ್ ನಿಲ್ದಾಣದ ಬಳಿ ಪಂಚಾಯ್ತಿದಾರರನ್ನು ಬರಮಾಡಿಕೊಂಡು ದಾಳಿ ವಿಚಾರವನ್ನು ತಿಳಿಸಿ,  ದ್ವಿ ಚಕ್ರ ವಾಹನಗಳಲ್ಲಿ  ಪಂಚಾಯ್ತಿದಾರರೊಂದಿಗೆ ಹೊರಟು ಬೆಳಿಗ್ಗೆ 9-00 ಗಂಟೆಗೆ ಗೂಳೂರು ಸರ್ಕಲ್ ಬಿಸ್ಮಿಲ್ಲಾ ಟೀ ಅಂಗಡಿಯ ಬಳಿ ಬಂದಾಗ   ಆಸಾಮಿಯು  ಸಮವಸ್ತ್ರದಲ್ಲಿದ್ದ ನಮ್ಮನ್ನು ನೋಡಿ ತನ್ನ ಹೆಗಲ ಮೇಲಿದ್ದ ಪ್ಲಾಸ್ಟಿಕ್ ಚೀಲವನ್ನು ಬಿಸಾಕಿ ಓಡಿಹೋದಾಗ ಪಿಸಿ-276 ರವರು ಹಿಂಬಾಲಿಸಿ ಹಿಡಿದುಕೊಳ್ಳಲು ಹೋದಾಗ ಕೈಯಿಗೆ ಸಿಗದೇ ಓಡಿ ಹೋಗಿರುತ್ತಾನೆ. ನಂತರ  ಪಂಚರ ಸಮಕ್ಷಮ ಪರಿಶೀಲಿಸಲಾಗಿ ಸ್ಥಳದಲ್ಲಿ ಪ್ಲಾಸ್ಟಿಕ್ ಚೀಲವನ್ನು ತೆಗೆದು  ನೋಡಲಾಗಿ 2 ಬಾಕ್ಸ್ ಗಳಿದ್ದು 1]  90 ML ಸಾಮರ್ಥ್ಯದ HAYWARDS CHEERS WHISKY ಯ 96 ಟೆಟ್ರಾ ಪಾಕೇಟ್ ಗಳಿರುತ್ತವೆ, 2]  90 ML ಸಾಮರ್ಥ್ಯದ HAYWARDS CHEERS WHISKY ಯ 96 ಟೆಟ್ರಾ ಪಾಕೇಟ್ ಗಳಿರುತ್ತವೆ, ಇವುಗಳು ಒಟ್ಟು 17 ಲೀಟರ್ 280 ಎಂ.ಎಲ್ ಮದ್ಯವಿದ್ದು, ಇದರ ಒಟ್ಟು ಮೌಲ್ಯ 6,744 /- ರೂ.ಗಳಾಗಿರುತ್ತದೆ. ಸದರಿ ಆಸಾಮಿಯ  ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡಲು ಸಾಗಿಸುತ್ತಿದ್ದು  ಮೇಲ್ಕಂಡ  ಮಾಲನ್ನು ಪಂಚರ ಸಮಕ್ಷಮ ಪಂಚನಾಮೆಯ ಮೂಲಕ ಅಮಾನತ್ತು ಪಡಿಸಿಕೊಂಡು ಮಾಲು ಹಾಗೂ ಅಸಲು ಪಂಚನಾಮೆಯೊಂದಿಗೆ ಬೆಳಿಗ್ಗೆ 10-30 ಗಂಟೆಗೆ ಠಾಣೆಯಲ್ಲಿ ಹಾಜರುಪಡಿಸುತ್ತಿದ್ದು, ಮೇಲ್ಕಂಡ ನಾಗೇಶ ನಾಯ್ಕ ಬಿನ್ ರವಿ ನಾಯ್ಕ, 28 ವರ್ಷ, ಲಂಬಾಣಿ ಜನಾಂಗ, ವಾಸ ಸದ್ದುಪಲ್ಲಿ ತಾಂಡ ಗ್ರಾಮ ಬಾಗೇಪಲ್ಲಿ ತಾಲ್ಲೂಕು ರವರ  ವಿರುದ್ದ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಕೋರಿ ನೀಡಿದ ವರದಿಯ ದೂರು.

 

2. ಬಟ್ಲಹಳ್ಳಿ ಪೊಲೀಸ್‌ ಠಾಣೆ ಮೊ.ಸಂ.73/2021 ಕಲಂ. 188,269,271 ಐ.ಪಿ.ಸಿ & 87 ಕೆ.ಪಿ ಆಕ್ಟ್ & 51(b) THE DISASTER MANAGEMENT ACT, 2005:-

          ಘನ ನ್ಯಾಯಾಲಯದಲ್ಲಿ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಶ್ರಿ ಟಿ.ಎನ್ ಪಾಪಣ್ಣ ಆದ ನಾನು  ನಿವೇದಿಸಿಕೊಳ್ಳುವುದೇನೆಂದರೆ, ನಾನು ಈ ದಿನ ದಿನಾಂಕ:18/05/2021 ರಂದು ಬೆಳಿಗ್ಗೆ 10-00 ಗಂಟೆಯಲ್ಲಿ ಠಾಣಾ ವ್ಯಾಪ್ತಿಯ ಬೆಳಗಿನ ಗಸ್ತು ಕರ್ತವ್ಯದಲ್ಲಿ ಇದ್ದಾಗ ನನಗೆ ಠಾಣಾ ವ್ಯಾಪ್ತಿಯ ಯನಮಲಪಾಡಿ ಗ್ರಾಮದ ಬಳಿ ಯನಮಲಪಾಡಿ ಗ್ರಾಮದ ವಾಸಿ ಬಾಬು ಮತ್ತು ಮುತ್ತುರೆಡ್ಡಿ ರವರ ಜಮೀನುಗಳ ಮಧ್ಯದಲ್ಲಿ ಇರುವ ಕಾಲುವೆಯಲ್ಲಿರುವ  ಹೊಂಗೆಮರದ ಕೆಳಗಡೆ ಯಾರೋ ಆಸಾಮಿಗಳು ಸರ್ಕಾರದ ಕರೋನ ಸಾಂಕ್ರಾಮಿಕ ಖಾಯಿಲೆಯ ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟವಾಡುತ್ತಿರುವುದಾಗಿ ಮಾಹಿತಿ ಬಂದಿದ್ದು, ನಾನು ಠಾಣಾ ಸಿಬ್ಬಂದಿಯವರಾದ ಹೆಚ್.ಸಿ-36 ವಿಜಯ್ ಕುಮಾರ್, ಹೆಚ್ ಸಿ -139 ಶ್ರೀನಾಥ, ಹೆಚ್.ಸಿ 176 ಮುನಿರಾಜು, ಸಿಪಿಸಿ – 387 ಅನೀಲ್ ಕುಮಾರ್, ಸಿಪಿಸಿ 291 ಗಂಗಾಧರ, ರವರನ್ನು ಯನಮಲಪಾಡಿ ಗ್ರಾಮಕ್ಕೆ ಬರಮಾಡಿಕೊಂಡು ಜೀಪ್ ನಲ್ಲಿ ಯನಮಲಪಾಡಿ ಗ್ರಾಮಕ್ಕೆ ಹೋಗಿ ಅಲ್ಲಿ ಪಂಚರನ್ನು ಕರೆದುಕೊಂಡು ಯನಮಲಪಾಡಿ ಗ್ರಾಮದ ಬಾಬು ರವರ ಜಮೀನಿನ ಬಳಿಗೆ  ಬೆಳಿಗ್ಗೆ 10-45 ಗಂಟೆಗೆ ಹೋಗಿ ದೂರದಲ್ಲಿ ಜೀಪ್ ನಿಲ್ಲಿಸಿ ನೋಡಲಾಗಿ ಕರೋನಾ ಸಾಂಕ್ರಾಮಿಕ ಖಾಯಿಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರೋನ ಸಾಂಕ್ರಾಮಿಕ ಖಾಯಿಲೆ ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಗುಂಪು ಸೇರದಂತೆ, ಸಾರ್ವಜನಿಕವಾಗಿ ಅನಗತ್ಯವಾಗಿ ಸಂಚರಿಸದಂತೆ ಹಾಗೂ ಪೇಸ್ ಮಾಸ್ಕ್ ಧರಿಸುವಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸರ್ಕಾರ ಲಾಕ್ ಡೌನ್ ಆದೇಶಿದ್ದರೂ  ಸಹ ಯಾರೋ ಆಸಾಮಿಗಳು ಹೊಂಗೆ ಮರದ ಕೆಳಗಡೆ ಗುಂಪಾಗಿ ಒಬ್ಬರ ಪಕ್ಕ ಒಬ್ಬರಂತೆ ವೃತ್ತಾಕಾರವಾಗಿ ಕುಳಿತು ಕರೋನ ಸಾಂಕ್ರಾಮಿಕ ಖಾಯಿಲೆಯ ಸರ್ಕಾರದ ಲಾಕಡೌನ್ ಆದೇಶವನ್ನು ಉಲ್ಲಂಘಿಸಿ  ಅಂದರ್ 100 ರೂ ಬಾಹರ್ 200 ರೂ ಎಂದು ಕೂಗುತ್ತಾ ಹಣವನ್ನು ಪಣವಾಗಿಟ್ಟು ಕಾನೂನು ಬಾಹಿರವಾಗಿ ಅಕ್ರಮ ಜೂಜಾಟವಾಡುತ್ತಿದ್ದ ಬಗ್ಗೆ ಖಚಿತಪಡಿಸಿಕೊಂಡು ಸದರಿಯವರನ್ನು ನಾನು ಮತ್ತು ಸಿಬ್ಬಂದಿಯವರು ಸುತ್ತುವರೆದು ಎಲ್ಲಿಯೂ ಹೋಗದಂತೆ ಸೂಚಿಸಿದಾಗ  ಅಲ್ಲಿದ್ದ ಆಸಾಮಿಗಳು ಓಡಿ ಹೋಗಲು ಯತ್ನಿಸಿದ್ದು ಸದರಿಯವರನ್ನು ಸಿಬ್ಬಂದಿಯ ಸಹಾಯದಿಂದ ವಶಕ್ಕೆ ಪಡೆದು ಅವರುಗಳ  ಹೆಸರು ಮತ್ತು ವಿಳಾಸ ಕೇಳಲಾಗಿ 1) ಶ್ರೀ.ರೆಡ್ಡೆಪ್ಪ ಬಿನ್ ಪೆದ್ದನ್ನ, 63ವರ್ಷ, ಬೋವಿ ಜನಾಂಗ, ಪಿ.ಟಿ.ಎಂ ಮಂಡಲಂ, ತಂಬಾಲಪಲ್ಲಿ ತಾಲ್ಲೂಕು, ಚಿತ್ತೂರು ಜಿಲ್ಲೆ, ಆಂದ್ರಪ್ರದೇಶ 2)  ಶ್ರೀ.ಬಾಸ್ಕರ್ ಬಿನ್ ಚನ್ನರಾಯಪ್ಪ, 32ವರ್ಷ, ಆದಿ ಕರ್ನಾಟಕ ಜನಾಂಗ, ಜಿರಾಯ್ತಿ, ಕೊಂಡ್ಲಿಗಾನಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು 9535646611, 3)ಶ್ರೀ.ವೆಂಕಟೇಶ್ ಬಿನ್ ಲಕ್ಷ್ಮಿನಾರಾಯ, 28ವರ್ಷ, ಭಜಂತ್ರಿ ಜನಾಂಗ, ಕುಲ ಕಸಬು, ಯನಮಲಪಾಡಿ ಗ್ರಾಮ, ಚಿಂತಾಮಣಿ ತಾಲ್ಲೂಕು 8500943263, 4)ಶ್ರೀ.ಸಿದ್ದಯ್ಯ ಬಿನ್ ಲೇಟ್ ಸುಬ್ಬರಾಯಪ್ಪ, 42ವರ್ಷ, ಭಜಂತ್ರಿ ಜನಾಂಗ, ಕುಲ ಕಸಬು, ಯನಮಲಪಾಡಿ ಗ್ರಾಮ, ಚಿಂತಾಮಣಿ ತಾಲ್ಲೂಕು 9606654562, 5)ಶ್ರೀ.ಶಮೀವುಲ್ಲಾ ಬಿನ್ ಹುಸೇನ್, 28ವರ್ಷ, ಮುಸ್ಲಿಂ ಜನಾಂಗ, ಜಿರಾಯ್ತಿ, ಯನಮಲಪಾಡಿ ಗ್ರಾಮ, ಚಿಂತಾಮಣಿ ತಾಲ್ಲೂಕು 8904689867 ಎಂದು ತಿಳಿಸಿದ್ದು, ನಂತರ ಸ್ಥಳದಲ್ಲಿ ಪಂಚರ ಸಮಕ್ಷಮ ಪರಿಶೀಲಿಸಲಾಗಿ ಸ್ಥಳದಲ್ಲಿ ಒಂದು ಬಿಳಿ ಗೋಣಿಚೀಲ ನೆಲದಲ್ಲಿ ಹಾಸಿದ್ದು, ಸದರಿ ಗೋಣಿಚೀಲದ ಮೇಲೆ ಅಂದರ್ ಬಾಹರ್ ಜೂಜಾಟವಾಡಲು ಪಣವಾಗಿಟ್ಟಿದ್ದ ಹಣ, ಮತ್ತು ಇಸ್ಟೀಟು ಎಲೆ ಇದ್ದು, ಇವುಗಳನ್ನು ಪರಿಶೀಲಿಸಲಾಗಿ ಒಟ್ಟು 52 ಇಸ್ಟೀಟ್ ಎಲೆಗಳಿದ್ದು, ನಗದು ಹಣ ಒಟ್ಟು 2430/-  ರೂಗಳಿರುತ್ತೆ. ಇಸ್ಪೀಟ್ ಜೂಜಾಟ ಆಡುತ್ತಿದ್ದ 5 ಜನ ಆಸಾಮಿಗಳನ್ನು, ಅವರು ಆಟಕ್ಕೆ ಪಣವಾಗಿಟ್ಟಿದ್ದ, 2430/- ರೂಗಳ ನಗದು ಹಣವನ್ನು, ಒಂದು ಗೋಣಿಚೀಲ ಹಾಗೂ 52 ಇಸ್ಟೀಟ್ ಎಲೆಗಳನ್ನು ಈ ಕೇಸಿನ ಮುಂದಿನ ಕ್ರಮಕ್ಕಾಗಿ ಬೆಳಿಗ್ಗೆ 11-00 ಗಂಟೆಯಿಂದ ಮಧ್ಯಾಹ್ನ 12-00 ಗಂಟೆಯವರೆಗೆ ಪಂಚರ ಸಮಕ್ಷಮ ಪಂಚನಾಮೆ ಕ್ರಮ ಜರುಗಿಸಿ ಅಮಾನತ್ತುಪಡಿಸಿಕೊಂಡು ಮಾಲುಗಳು ಮತ್ತು ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಮಧ್ಯಾಹ್ನ 12-30 ಗಂಟೆಗೆ ಹಾಜರಾಗಿ ಸ್ವತಃ ಠಾಣೆಯ ಎನ್ ಸಿ ಆರ್ ನಂ: 74/2021  ರಂತೆ ದಾಖಲಿಸಿಕೊಂಡು ಆರೋಪಿಗಳ ಮತ್ತು ಮಾಲಿನ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಘನ ನ್ಯಾಯಾಲಯದ ಅನುಮತಿಗಾಗಿ ಮನವಿಯನ್ನು ಹೆಚ್ ಸಿ 107 ರವರ ಮೂಲಕ ರವಾನಿಸಿಕೊಂಡು ಘನ ನ್ಯಾಯಾಲಯದ ಅನುಮತಿಯನ್ನು ಪಡೆದು ಕೊಂಡು ಮಧ್ಯಾಹ್ನ 1-45 ಗಂಟೆಗೆ ಠಾಣೆಗೆ ಹಾಜರುಪಡಿಸಿದ್ದನ್ನು ಪಡೆದು ಠಾಣೆಯ ಮೊ ಸಂಖ್ಯೆ: 73/2021 ಕಲಂ: 87 ಕೆ ಪಿ ಆಕ್ಟ್ ಮತ್ತು ಕಲಂ: 188.269.271 ಐಪಿಸಿ ಮತ್ತು ಕಲಂ: 51(b) DISASTER MANAGEMENT ACT-2005 ರೀತ್ಯಾ ಪ್ರಕರಣ ದಾಖಲಿಸಿಕೊಂಡಿರುತ್ತೆ.

 

3. ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣೆ ಮೊ.ಸಂ.221/2021 ಕಲಂ. 269,270,188 ಐ.ಪಿ.ಸಿ & 51(b) THE DISASTER MANAGEMENT ACT, 2005:-

          ದಿನಾಂಕ: 17/05/2021 ರಂದು ಸಂಜೆ 5.15 ಗಂಟೆಗೆ ಠಾಣೆಯ ಶ್ರೀ.ನಾರಾಯಣಸ್ವಾಮಿ.ಕೆ, ಪಿ.ಎಸ್.ಐ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಈ ದಿನ ದಿನಾಂಕ: 17/05/2021 ರಂದು ಸಂಜೆ 4.00 ಗಂಟೆ ಸಮಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ತಾನು ತಮ್ಮ ಸಿಬ್ಬಂದಿಯವರಾದ ಸಿ.ಪಿ.ಸಿ-430 ನರಸಿಂಹಯ್ಯ ರವರೊಂದಿಗೆ ಠಾಣಾ ಜೀಪ್ ಸಂಖ್ಯೆ ಕೆ.ಎ-40-ಜಿ-326 ರಲ್ಲಿ ಠಾಣಾ ಸರಹದ್ದಿನಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ವಾಯುಪುತ್ರ ನಗರದ ರಾಜೇಂದ್ರ ಬಿನ್ ಲೇಟ್ ನರಸಿಂಹಪ್ಪ ರವರು ಅವರ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವುದಾಗಿ ಮಾಹಿತಿ ಬಂದಿದ್ದು ಅದರಂತೆ ತಾವು ಸಂಜೆ 4.15 ಗಂಟೆಗೆ ವಾಯುಪುತ್ರ ನಗರದ ರಾಜೇಂದ್ರ ರವರು ಅವರ ಚಿಲ್ಲರೆ ಅಂಗಡಿಯ ಬಳಿ ಹೋದಾಗ ಸದರಿ ಅಂಗಡಿಯಲ್ಲಿ ಅದರ ಮಾಲೀಕರು ಸರ್ಕಾರದ ಕೋವಿಡ್-19 ಸಾಂಕ್ರಾಮಿಕ ರೋಗದ ಸಂಬಂಧ ಇರುವ ಆದೇಶಗಳನ್ನು ಪಾಲಿಸದೇ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್ ರೋಗಾಣು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹಾ ಕಾನೂನು ಬಾಹಿರವಾಗಿ 3-4 ಜನರನ್ನು ಅಂಗಡಿಯ ಬಳಿ ನಿಲ್ಲಿಸಿಕೊಂಡು ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು, ಸದರಿ ಅಂಗಡಿಯ ಮಾಲೀಕರ ಹೆಸರು ಮತ್ತು ವಿಳಾಸವನ್ನು ಕೇಳಲಾಗಿ ರಾಜೇಂದ್ರ ಬಿನ್ ಲೇಟ್ ನರಸಿಂಹಪ್ಪ, 40 ವರ್ಷ, ಬ್ರಾಹ್ಮಣ ಜನಾಂಗ, ಚಿಲ್ಲರೆ ಅಂಗಡಿ ಮಾಲೀಕರು, ವಾಸ: ವಾಯುಪುತ್ರ ನಗರ, ಚಿಂತಾಮಣಿ ತಾಲ್ಲೂಕು ಎಂತ ತಿಳಿಸಿದ್ದು, ಆದ ಕಾರಣ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ, ಅಂತರ ಕಾಯ್ದುಕೊಳ್ಳದೇ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಸದರಿ ಚಿಲ್ಲರೆ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿರುತ್ತೆ.

 

4. ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣೆ  ಮೊ.ಸಂ.222/2021 ಕಲಂ. 269,270,188 ಐ.ಪಿ.ಸಿ & 51(b) THE DISASTER MANAGEMENT ACT, 2005:-

          ದಿನಾಂಕ: 17/05/2021 ರಂದು ಸಂಜೆ 7.15 ಗಂಟೆಗೆ ಠಾಣೆಯ ಶ್ರೀ.ನಾರಾಯಣಸ್ವಾಮಿ.ಕೆ, ಪಿ.ಎಸ್.ಐ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಈ ದಿನ ದಿನಾಂಕ: 17/05/2021 ರಂದು ಸಂಜೆ 5.45 ಗಂಟೆ ಸಮಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ತಾನು ತಮ್ಮ ಸಿಬ್ಬಂದಿಯವರಾದ ಸಿ.ಪಿ.ಸಿ-430 ನರಸಿಂಹಯ್ಯ ರವರೊಂದಿಗೆ ಠಾಣಾ ಜೀಪ್ ಸಂಖ್ಯೆ ಕೆ.ಎ-40-ಜಿ-326 ರಲ್ಲಿ ಠಾಣಾ ಸರಹದ್ದಿನಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ಎನ್.ಕೊತ್ತೂರು ನಗರದ ವೆಂಕಟೇಶ ಬಿನ್ ಬೈಲಾಂಜಪ್ಪ ರವರು ಅವರ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವುದಾಗಿ ಮಾಹಿತಿ ಬಂದಿದ್ದು ಅದರಂತೆ ನಾವು ಸಂಜೆ 6.00 ಗಂಟೆಗೆ ಎನ್.ಕೊತ್ತೂರು ಗ್ರಾಮದ ವೆಂಕಟೇಶ ರವರು ಅವರ ಚಿಲ್ಲರೆ ಅಂಗಡಿಯ ಬಳಿ ಹೋದಾಗ ಸದರಿ ಅಂಗಡಿಯಲ್ಲಿ ಅದರ ಮಾಲೀಕರು ಸರ್ಕಾರದ ಕೋವಿಡ್-19 ಸಾಂಕ್ರಾಮಿಕ ರೋಗದ ಸಂಬಂಧ ಇರುವ ಆದೇಶಗಳನ್ನು ಪಾಲಿಸದೇ ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್ ರೋಗಾಣು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹಾ ಕಾನೂನು ಬಾಹಿರವಾಗಿ 3-4 ಜನರನ್ನು ಅಂಗಡಿಯ ಬಳಿ ನಿಲ್ಲಿಸಿಕೊಂಡು ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು, ಸದರಿ ಅಂಗಡಿಯ ಮಾಲೀಕರ ಹೆಸರು ಮತ್ತು ವಿಳಾಸವನ್ನು ಕೇಳಲಾಗಿ ವೆಂಕಟೇಶ ಬಿನ್ ಬೈಲಾಂಜಪ್ಪ, 25 ವರ್ಷ, ಕುರುಬ ಜನಾಂಗ, ಚಿಲ್ಲರೆ ಅಂಗಡಿ ಮಾಲೀಕರು, ವಾಸ: ಎನ್.ಕೊತ್ತೂರು ಗ್ರಾಮ, ಚಿಂತಾಮಣಿ ತಾಲ್ಲೂಕು ಎಂತ ತಿಳಿಸಿದ್ದು, ಆದ ಕಾರಣ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ, ಅಂತರ ಕಾಯ್ದುಕೊಳ್ಳದೇ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಸದರಿ ಚಿಲ್ಲರೆ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿರುತ್ತೆ.

 

5. ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣೆ ಮೊ.ಸಂ.47/2021 ಕಲಂ. 269,270,188 ಐ.ಪಿ.ಸಿ & 51(b) THE DISASTER MANAGEMENT ACT, 2005:-

          ದಿನಾಂಕ 17-05-2021 ರಂದು ಸಂಜೆ 5.15 ಗಂಟೆಗೆ ಪಿ.ಎಸ್.ಐ ರವರು ಠಾಣೆಗೆ ಹಾಜರಾಗಿ ನೀಡಿದ ವರದಿ ಸಾರಾಂಶವೇನೆಂದರೆ, ಕೋವಿಡ್-19 ಪ್ರಯುಕ್ತ ಸರ್ಕಾರದ ಆದೇಶ ಮತ್ತು ನಿರ್ಭಂದಗಳು ಮಾಡಿರುವ ಹಿನ್ನೆಲೆಯಲ್ಲಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ & ಮುರಗಮಲ್ಲಾ ಗ್ರಾಮದಲ್ಲಿ ಕೋವಿಡ್-19 ರೋಗದ ಬಗ್ಗೆ ತಿಳಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು, ಸರ್ಕಾರ   ಹೊರಡಿಸಿರುವ ಆದೇಶಗಳನ್ನು ಪಾಲಿಸಲು ಹಾಗೂ ಪ್ರತಿಯೊಬ್ಬರು ಮಾಸ್ಕ್ ಧರಿಸುವಂತೆ ಹಾಗೂ ಒಬ್ಬರಿಂದ ಒಬ್ಬರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ನಿಂತುಕೊಳ್ಳಲು ಚಿಲ್ಲರೆ ಅಂಗಡಿ ಮುಂದೆ ಬಾಕ್ಸ್ ಗಳನ್ನು ಹಾಕಿ ಸದರಿ ಬಾಕ್ಸ್ ಗಳಲ್ಲಿ ನಿಂತುಕೊಂಡು ಸಾಮಾಜಿಕ ಅಂತರವನ್ನು ಕಾಪಾಡುವಂತೆ ಅರಿವು ಮೂಡಿಸಿರುತ್ತೇವೆ. ಹೀಗಿರುವಾಗ ದಿನಾಂಕ:17-05-2021 ರಂದು ಮಧ್ಯಾಹ್ನ 15-45 ಗಂಟೆಯಲ್ಲಿ ಮುರಗಮಲ್ಲಾ ಗ್ರಾಮದಲ್ಲಿ ಗಸ್ತು ಮಾಡುತ್ತಿರುವಾಗ ಒಂದು ಚಿಲ್ಲರೆ ಅಂಗಡಿ ಬಳಿ ಮೂರು - ನಾಲ್ಕು ಜನರು ಗುಂಪಾಗಿ ಸೇರಿದ್ದು ತಮ್ಮನ್ನು ನೋಡಿದ ತಕ್ಷಣ ಅಲ್ಲಿಂದ ಓಡಿ ಹೋಗಿರುತ್ತಾರೆ. ನಂತರ ತಾನು ಸ್ಥಳಕ್ಕೆ ಹೋಗಿ ನೋಡಲಾಗಿ ಸದರಿ ಚಿಲ್ಲರೆ ಅಂಗಡಿ ಮಾಲೀಕ  ಕೋವಿಡ್-19 ರೋಗವು ಒಬ್ಬರಿಂದ ಒಬ್ಬರಿಗೆ ಹರಡುವ ಬಗ್ಗೆ ಗೊತ್ತಿದ್ದರೂ ಕೊವೀಡ್ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೆ ನಿರ್ಲಕ್ಷತೆಯನ್ನು ವಹಿಸಿ, ಜನರನ್ನು ಗುಂಪಾಗಿ ಸೇರಿಸಿಕೊಂಡು  ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ನಿಯಮ ಬಾಹಿರವಾಗಿ ವ್ಯಾಪಾರ ಮಾಡುತ್ತಿದ್ದು, ಸದರಿ ಚಿಲ್ಲರೆ ಅಂಗಡಿಯಲ್ಲಿ ನಿಯಮ ಬಾಹಿರವಾಗಿ ವ್ಯಾಪಾರ ಮಾಡುತ್ತಿದ್ದ ಮಾಲೀಕನ ಹೆಸರು & ವಿಳಾಸ ಕೇಳಲಾಗಿ ನಿಜಾಂ ಬಿನ್ ಷೇಕ್ ಅಹ್ಮದ್,  28 ವರ್ಷ, ಮುಸ್ಲಿಂ ಜನಾಂಗ, ಚಿಲ್ಲರೆ ಅಂಗಡಿ ವ್ಯಾಪಾರ, ವಾಸ: ಮುರಗಮಲ್ಲಾ ಗ್ರಾಮ, ಚಿಂತಾಮಣಿ ತಾಲ್ಲೂಕು, ಎಂದು ತಿಳಿಸಿದರು. ಸದರಿ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಮಾಲೀಕ ನಿಜಾಂ ರವರು ಕೋವಿಡ್-19 ರೋಗ ತಡೆಗಟ್ಟುವ ಬಗ್ಗೆ ಯಾವುದೇ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳದೇ ಸಾರ್ವಜನಿಕರನ್ನು ಗುಂಪಾಗಿ ಸೇರಿಸಿಕೊಂಡು ವ್ಯಾಪಾರ ಮಾಡಿ ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ಹಾಗೂ ಜಿಲ್ಲಾ ಪ್ರಾಧಿಕಾರ ಹೊರಡಿಸಿರುವ ಆದೇಶಗಳನ್ನು ಉಲ್ಲಂಘನೆ ಮಾಡಿ ಪ್ರಾಣಕ್ಕೆ ಅಪಾಯಕಾರಿಯಾದ ಕರೋನಾ ಸಾಂಕ್ರಾಮಿಕ ರೋಗದ ಸೋಂಕನ್ನು ಹರಡುವ ಸಂಭವವಿರುವುದೆಂದು ತಿಳಿದಿದ್ದರೂ ಸಹ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತನ ತೋರ್ಪಡಿಸಿರುವುದು ಕಂಡುಬಂದಿರುತ್ತದೆ.  ಆದ್ದರಿಂದ ಸದರಿ ಚಿಲ್ಲರೆ ಅಂಗಡಿ ಮಾಲೀಕರಾದ ನಿಜಾಂ ಬಿನ್ ಷೇಕ್ ಅಹ್ಮದ್ ರವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲು ಕೋರಿ ನೀಡಿದ ವರದಿ ಸಾರಾಂಶವಾಗಿರುತ್ತೆ.

 

6. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್‌ ಠಾಣೆ ಮೊ.ಸಂ.161/2021 ಕಲಂ. 15(A),32(3) ಕೆ.ಇ ಆಕ್ಟ್:-

          ದಿನಾಂಕ:-18.05.2021 ರಂದು ಬೆಳಿಗ್ಗೆ 9.30 ಗಂಟೆಗೆ ಪಿಸಿ-543 ಸುದಾಕರ್ ರವರು ಮಾಲು ಮತ್ತು ಆರೋಪಿಯೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ವರದಿಯ ಸಾರಾಂಶವೇನೆಂದರೆ, ದಿನಾಂಕ 18.05.2021 ರಂದು ಪಿಸಿ 543 ಸುಧಾಕರ್ ಆದ ನನ್ನನ್ನು ಗುಪ್ತ ಮಾಹಿತಿ ಸಂಗ್ರ ಕರ್ತವ್ಯಕ್ಕೆ ನೇಮಿಸಿದ್ದು ಅದರಂತೆ ನಾನು ಠಾಣಾ ಸರಹದ್ದಿನ ಗ್ರಾಮಗಳಾದ ಹಂಡಿಗನಾಳ, ಅಪ್ಪೇಗೌಡನಹಳ್ಳಿ, ಕೇಶವಪುರ ಗ್ರಾಮಗಳ ಕಡೆ ಗಸ್ತು ಮಾಡಿಕೊಂಡು ಬೆಳಿಗ್ಗೆ 8.30 ಗಂಟೆ ಸಮಯದಲ್ಲಿ ಚೌಡಸಂದ್ರ ಗ್ರಾಮದಲ್ಲಿ ಮಾಹಿತಿ ಸಂಗ್ರಹದಲ್ಲಿದ್ದಾಗ ಗ್ರಾಮದ ಬಾತ್ಮೀದಾರರಿಂದ ಚೌಡಸಂದ್ರ ಗ್ರಾಮದ ವಾಸಿಯಾದ ಹರೀಶ್ ಬಿನ್ ರಾಮಚಂದ್ರಪ್ಪ ರವರ ಚಿಲ್ಲರೆ ಅಂಗಡಿಯ ಮುಂಭಾಗದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾರೊ ಒಬ್ಬ ಅಸಾಮಿ ಅಕ್ರಮವಾಗಿ ಮಧ್ಯದ ಪಾಕೇಟುಗಳನ್ನಿಟ್ಟುಕೊಂಡು ಮಾರಾಟ ಮಾಡುತ್ತಾ ಸಾರ್ವಜನಿಕರಿಗೆ ಕುಡಿಯಲು ಸ್ಥಳಾವಕಾಶ ಮಾಡಿಕೊಟ್ಟಿರುವುದಾಗಿ ಮಾಹಿತಿ ಬಂದಿದ್ದು, ಅದರಂತೆ ನಾನು ಹರೀಶ್ ಬಿನ್ ರಾಮಚಂದ್ರಪ್ಪ ರವರ ಚಿಲ್ಲರೆ ಅಂಗಡಿಯ ಬಳಿ ಹೋಗಿ ಮರೆಯಲ್ಲಿ ನಿಂತು ನೋಡಲಾಗಿ ಚಿಲ್ಲರೆ ಅಂಗಡಿಯ ಮುಂಭಾಗ ಯಾರೋ ಮೂರು ಜನ ಆಸಾಮಿಗಳು ಮದ್ಯವನ್ನು ಸೇವನೆ ಮಾಡುತ್ತಾ ಕುಳಿತಿದ್ದು ಒಬ್ಬ ಅಸಾಮಿ ತನ್ನ ಬಳಿ ಇದ್ದ ಒಂದು ಕಪ್ಪು ಬಣ್ಣದ ಕವರ್ ನಲ್ಲಿ ಮದ್ಯದ ಟೆಟ್ರಾ ಪಾಕೇಟ್ ಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯದ ಪಾಕೇಟ್ ಗಳನ್ನು ಮಾರಾಟ ಮಾಡುತ್ತಾ ಕುಡಿಯಲು ಅನುವು ಮಾಡಿಕೊಟ್ಟಿರುವುದು ಖಚಿತವಾದ ಮೇಲೆ ದಾಳಿ ಮಾಡಲಾಗಿ ಮಧ್ಯವನ್ನು ಕುಡಿಯುತ್ತಿದ್ದ ಸಾರ್ವಜನಿಕರು ಸಮವಸ್ತ್ರದಲ್ಲಿದ್ದ ನನ್ನನ್ನು ಕಂಡು ಓಡಿ ಹೋಗಿದ್ದು, ಮದ್ಯವನ್ನು ಹಿಡಿದುಕೊಂಡು ಕುಳಿತಿದ್ದ ಅಸಾಮಿಯನ್ನು ವಶಕ್ಕೆ ಪಡೆದುಕೊಂಡು ಆವರ ಹೆಸರು ವಿಳಾಸ ಕೇಳಲಾಗಿ ರಾಜೇಶ ಬಿನ್ ರಾಮಾಂಜಿನಪ್ಪ, 32 ವರ್ಷ, ವಕ್ಕಲಿಗರು, ಕೂಲಿ ಕೆಲಸ, ಚೌಡಸಂದ್ರ ಗ್ರಾಮ ಶಿಡ್ಲಘಟ್ಟ ತಾಲ್ಲೂಕು ಎಂದು ತಿಳಿಸಿದ್ದು, ನಂತರ ಸದರಿ ಆಸಾಮಿ ಬಳಿ ಇದ್ದ ಕವರ್ ನಲ್ಲಿ ಪರಿಶೀಲಿಸಲಾಗಿ ಅದರಲ್ಲಿ RAJA WHISKY ಯ 10 ಟೆಟ್ರಾ ಪಾಕೇಟ್ ಗಳಿದ್ದು ಪ್ರತಿ ಟೆಟ್ರಾ ಪಾಕೇಟ್ ನ ಬೆಲೆ 35.13 ರೂ ಎಂದು ಇದ್ದು ಇವುಗಳ ಒಟ್ಟು ಬೆಲೆ 351.3 ರೂ.ಗಳಾಗಿರುತ್ತೆ ಸ್ಥಳದಲ್ಲಿ 4 ಪ್ಲಾಸ್ಟಿಕ್ ಗ್ಲಾಸುಗಳು, 3 ಖಾಲಿ ನೀರಿನ ಪಾಕೇಟುಗಳು ಹಾಗು 90 ಎಂ.ಎಲ್ ನ RAJA WHISKY 5 ಖಾಲಿ ಟೆಟ್ರಾ ಪಾಕೇಟ್ ಗಳಿದ್ದು, ಮೇಲ್ಕಂಡ ಆಸಾಮಿ ರಾಜೇಶ ಬಿನ್ ರಾಮಾಂಜಿನಪ್ಪ ರವರು ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಾ ಹಾಗೂ ಸಾರ್ವಜನಿಕರಿಗೆ ಕುಡಿಯಲು ಸ್ಥಳಾವಕಾಶ ಮಾಡಿಕೊಟ್ಟಿರುವುದು ಕಂಡು ಬಂದಿದ್ದರಿಂದ ಮಾಲು ಮತ್ತು ಅರೋಪಿಯನ್ನು ವಶಕ್ಕೆ ಪಡೆದುಕೊಂಡು ಬಂದು ಹಾಜರುಪಡಿಸಿದ್ದು ಮುಂದಿನ ಕ್ರಮ ಕೈಗೊಳಬೇಕಾಗಿ ನೀಡಿದ ವರದಿಯನ್ನು ಪಡೆದು ಪ್ರಕರಣ ದಾಖಲಿಸಿರುತ್ತೆ.

 

7. ಶಿಡ್ಲಘಟ್ಟ ಪುರ ಪೊಲೀಸ್‌ ಠಾಣೆ ಮೊ.ಸಂ.54/2021 ಕಲಂ. ಮನುಷ್ಯ ಕಾಣೆ:-

          ದಿನಾಂಕ-17.05.2021 ರಂದು ಸಂಜೆ 04.30 ಗಂಟೆಯಲ್ಲಿ ಪಿರ್ಯಾದಿದಾರರಾದ ಶ್ರೀಮತಿ ನೂರಸಬಾ ಕೋಂ ನವಾಜ್ ಪಾಷ, ರಹಮತ್ ನಗರ, ಶಿಡ್ಲಘಟ್ಟ ನಗರ ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ನಾನು ಸುಮಾರು 8 ವರ್ಷಗಳ ಹಿಂದೆ ಇದೇ ಶಿಡ್ಲಘಟ್ಟ ಟೌನ್ ರಹಮತ್ ನಗರದ ನವಜ್ ಪಾಷ ಬಿನ್ ಸರ್ದಾರ್ ರವರನ್ನು ಮದುವೆ ಮಾಡಿಕೊಂಡಿದ್ದು, ನಮಗೆ ಇಬ್ಬರು ಹೆಣ್ಣು ಮಕ್ಕಳಾಗಿರುತ್ತಾರೆ. ನನ್ನ ಗಂಡ ಮದುವೆಯಾದ 1 ವರ್ಷದ ನಂತರ ಅವರ ತಾಯಿ ಮನೆಯಿಂದ ನನ್ನನ್ನು ನಮ್ಮ ತಂದೆ ಮನೆಗೆ ಕರೆದುಕೊಂಡು ಬಂದಿದ್ದು, ನಾವು ರೇಷ್ಮೇ ಕೆಲಸದಿಂದ ಅನ್ಯೋನ್ಯವಾಗಿ ಜೀವನ ಮಾಡಿಕೊಂಡಿರುತ್ತೇವೆ. ಹೀಗಿರುವಾಗ ದಿನಾಂಕ.16.05.2021 ರಂದು ಬೆಳಿಗ್ಗೆ ಸುಮಾರು 10.00 ಗಂಟೆಯಲ್ಲಿ ನನ್ನ ಗಂಡ ಮನೆಯಲ್ಲಿ ಕಾಫೀ ಕುಡಿದು ಮನೆಯಿಂದ ಹೊರಗೆ ಹೋದವನು ವಾಪಸ್ಸು ಬಂದಿರುವುದಿಲ್ಲ. ನಾನು ಹಲವು ಬಾರಿ ಊಟಕ್ಕೆ ಬರಲು ನನ್ನ ಗಂಡನ ಮೊಬೈಲ್ ನಂಬರ್ 9901126707 ಗೆ ಕರೆ ಮಾಡಿದರೂ ಪೋನ್ ರೀಸೀವ್ ಮಾಡಿರುವುದಿಲ್ಲ. ನಂತರ ಸಂಜೆ ಸುಮಾರು 6.45 ಗಂಟೆಗೆ ನನ್ನ ಗಂಡ ನಮ್ಮ ತಂದೆಯ ಪೋನ್ ಗೆ ಕರೆ ಮಾಡಿ ತಾನು ಏನೋ ಮಾತ್ರೆಗಳು ಸೇವಿಸಿದ್ದೇನೆ ಎಲ್ಲಿದ್ದೇನೆಂದು ಗೊತ್ತಾಗುತ್ತಿಲ್ಲ ಎಂದು ಪೋನ್ ಕಟ್ ಮಾಡಿರುತ್ತಾನೆ. ನಂತರ ನಾವು ಎಲ್ಲಾ ಕಡೆಗಳಲ್ಲಿ ಹುಡುಕಾಡಿದರೂ ಸಿಕ್ಕಿರುವುದಿಲ್ಲ. ಆದ್ದರಿಂದ ಕಾಣೆಯಾದ ನನ್ನ ಗಂಡನನ್ನು ಪತ್ತೆ ಮಾಡಿಕೊಡಲು ಈ ದಿನ ತಡವಾಗಿ ನೀಡಿದ ದೂರಿನ ಮೇರೆಗೆ ಈ ಪ್ರಕರಣ ದಾಖಲಿಸಿರುತ್ತೆ.

ಇತ್ತೀಚಿನ ನವೀಕರಣ​ : 18-05-2021 05:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080