ಅಭಿಪ್ರಾಯ / ಸಲಹೆಗಳು

 

1. ಬಟ್ಲಹಳ್ಳಿ ಪೊಲೀಸ್‌ ಠಾಣೆ ಮೊ.ಸಂ.75/2021 ಕಲಂ. 188,269,271 ಐ.ಪಿ.ಸಿ & 51(b) THE DISASTER MANAGEMENT ACT, 2005:-

          ಘನ ನ್ಯಾಯಾಲಯದಲ್ಲಿ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ.ಟಿ.ಎನ್.ಪಾಪಣ್ಣ ಆದ ನಾನು ನಿವೇದಿಸಿಕೊಳ್ಳುವುದೇನೆಂದರೆ ಈ ದಿನ ದಿನಾಂಕ 21/05/2021 ರಂದು  ನಾನು ಮತ್ತು ಠಾಣೆಯ ಸಿಬ್ಬಂದಿಯವರಾದ ಹೆಚ್.ಸಿ 139 ಶ್ರೀನಾಥ.ಎಂ.ಪಿ, ಹೆಚ್.ಸಿ 36 ವಿಜಯ್ ಕುಮಾರ್, ಪಿ.ಸಿ 387 ಅನೀಲ್ ಕುಮಾರ್, ಪಿ.ಸಿ 262 ಅಂಬರೀಶ್ ರವರು ಠಾಣಾ ವ್ಯಾಪ್ತಿಯ ನಲ್ಲಗುಟ್ಲಹಳ್ಳಿ, ಇರಗಂಪಲ್ಲಿ ಕಡೆಗಳಲ್ಲಿ ಗಸ್ತುಮಾಡಿಕೊಂಡು ಸಾರ್ವಜನಿಕರಿಗೆ ಕರೋನಾ ಕಾಯಿಲೆಯನ್ನು ತಡೆಗಟ್ಟುವ ಬಗ್ಗೆ ತಿಳುವಳಿಕೆಗಳನ್ನು ತಿಳಿಸಿಕೊಂಡು ಮಧ್ಯಾಹ್ನ ಸುಮಾರು 2-30 ಗಂಟೆ ಸಮಯದಲ್ಲಿ ಠಾಣಾ ವ್ಯಾಪ್ತಿಯ ನಾಗರಾಜಹೊಸಹಳ್ಳಿ ಗ್ರಾಮಕ್ಕೆ ಬಂದಾಗ ನಾಗರಾಜಹೊಸಹಳ್ಳಿ ಗ್ರಾಮದ ವೆಂಕಟರವಣಪ್ಪ ರವರ ಮನೆಯ ಮುಂಭಾಗದಲ್ಲಿ ಇರುವ ಸರ್ಕಾರಿ ಸಿಮೆಂಟ್ ರಸ್ತೆಯಲ್ಲಿ ಯಾರೋ ಕೆಲವು ಜನರು ಗುಂಪಾಗಿ ಸೇರಿಕೊಂಡು ಮಾಸ್ಕಗಳನ್ನು ಧರಿಸದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಒಬ್ಬರ ಪಕ್ಕದಲ್ಲಿ ಒಬ್ಬರು ವೃತ್ತಾಕಾರದಲ್ಲಿ ಕುಳಿದುಕೊಂಡು ಚೌಕಾಬಾರ ಆಟವನ್ನು ಆಡುತ್ತಿದ್ದು ಸದರಿಯವರುಗಳು ಪ್ರಾಣ ಹಾನಿಸಂಭವಿಸಬಹುದಾದ ಸಾಂಕ್ರಾಮಿಕ ರೋಗವಾದ ಕರೋನ ರೋಗವು ವ್ಯಾಪಕವಾಗಿ ಹರಡುತ್ತಿರುವ ವಿಚಾರವನ್ನು ತಿಳಿದಿದ್ದರೂ ಸಹ  ಸದರಿ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ಲಾಕ್ ಡೌನ್ ನ್ನು ಘೋಷಣೆಮಾಡಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಆದೇಶಮಾಡಿರುವ ವಿಚಾರವನ್ನು ತಿಳಿದಿದ್ದರೂ ಸಹ ಸದರಿ ಆಸಾಮಿಗಳು ಮಾಸ್ಕ್ ಧರಿಸದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸಾಂಕ್ರಾಮಿಕ ಕಾಯಿಲೆಯಾದ ಕರೋನ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೊರಡಿಸಿರುವ ನಿಯಮಗಳನ್ನು ಉಲ್ಲಂಘನೆಮಾಡಿರುವುದು ಕಂಡುಬಂದಿದ್ದರಿಂದ ಸದರಿ ಗುಂಪಿನಲ್ಲಿದ್ದವರ ಬಳಿಗೆ ನಾವುಗಳು ಹೋಗುತ್ತಿದ್ದಂತೆ ಗುಂಪಿನಲ್ಲಿ ಇದ್ದವರು ಸಮವಸ್ತ್ರದಲ್ಲಿ ಇದ್ದ ನಮ್ಮಗಳನ್ನು ನೋಡಿ ಓಡಿ ಹೋಗಲು ಯತ್ನಿಸಿದ್ದು ಸದರಿಯವರುಗಳನ್ನು ನಾನು ಮತ್ತು ಸಿಬ್ಬಂದಿಯವರು ಸುತ್ತುವರೆದು ಓಡಿಹೋಗದಂತ್ತೆ ನಿಲ್ಲಿಸಿ ಸದರಿಯವರ ಹೆಸರು ವಿಳಾಸಗಳನ್ನು ವಿಚಾರಿಸಲಾಗಿ 1)ಶ್ರೀ.ಲಿಂಗರಾಜು ಬಿನ್ ಲೇಟ್ ವೆಂಕಟಸ್ವಾಮಿ, 50ವರ್ಷ, ಗೊಲ್ಲರು, ಕೂಲಿ ಕೆಲಸ, ನಾಗರಾಜಹೊಸಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು, 2)ಆಂಜಪ್ಪ ಬಿನ್ ಲೇಟ್ ಚಿನ್ನರೆಡ್ಡೆಪ್ಪ, 40ವರ್ಷ, ಆದಿ ಕರ್ನಾಟಕ ಜನಾಂಗ, ಕೂಲಿ ಕೆಲಸ, ನಾಗರಾಜಹೊಸಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು. 3)ಶ್ರೀ.ರಾಧಾಕೃಷ್ಣ ಬಿನ್ ಲೇಟ್ ವೆಂಕಟರಾಮನ್ನ, 50ವರ್ಷ, ಗೊಲ್ಲರು, ಜಿರಾಯ್ತಿ, ನಾಗರಾಜಹೊಸಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು, 4) ಶ್ರೀ.ವೆಂಕಟರವಣಪ್ಪ ಬಿನ್ ಲೇಟ್ ಪೆದ್ದಮುನಿಶಾಮಿ, 52ವರ್ಷ, ಆದಿ ಕರ್ನಾಟಕ ಜನಾಂಗ, ಗಾರೆ ಕೆಲಸ, ನಾಗರಾಜಹೊಸಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು, 5) ಶ್ರೀ.ನಾಗರಾಜ ಬಿನ್ ವೆಂಕಟರಾಯಪ್ಪ, 40ವರ್ಷ, ನಾಯಕರು, ಕೂಲಿ ಕೆಲಸ, ನಾಗರಾಜ ಹೊಸಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು 6)ಅಭಿ ಬಿನ್ ನಾರಾಯಣಸ್ವಾಮಿ, 29ವರ್ಷ, ಗೊಲ್ಲರು, ಜಿರಾಯ್ತಿ, ನಾಗರಾಜಹೊಸಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು ಎಂದು ತಿಳಿಸಿದ್ದು ಸದರಿಯವರುಗಳನ್ನು ಮುಂದಿನ ಕ್ರಮದ ಬಗ್ಗೆ ವಶಕ್ಕೆ ಪಡೆದುಕೊಂಡು ಸಂಜೆ 3-00 ಗಂಟೆಗೆ ಠಾಣೆಗೆ ವಾಪಸ್ ಬಂದು ಸದರಿ ಆಸಾಮಿಗಳ ವಿರುದ್ದ ಸ್ವತಃ ವರದಿಯ ಮೇರೆಗೆ ಠಾಣೆಯ ಮೊ.ಸಂ 75/2021 ಕಲಂ 188, 269, 271 ಐ.ಪಿ.ಸಿ ಮತ್ತು ಕಲಂ 51(ಬಿ)  Disaster management act 2005 ರೀತ್ಯ ಕೇಸನ್ನು ದಾಖಲಿಸಿರುತ್ತೇನೆ.

 

2. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್‌ ಠಾಣೆ ಮೊ.ಸಂ.31/2021 ಕಲಂ. 279,337 ಐ.ಪಿ.ಸಿ :-

          ದಿನಾಂಕ:-22/05/2021 ರಂದು ಮಧ್ಯಾಹ್ನ 2-00 ಗಂಟೆಗೆ ಪಿರ್ಯಾಧಿದಾರರಾದ  ಶ್ರೀ.ಸಂದೀಪ್ ಬಿನ್ ರವಿ 27 ವರ್ಷ, ಮೊದಲಿಯಾರ್ ಜನಾಂಗ, ಆಸುಲೇಟರ್ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಇಂಜೀನಿಯರ್ ವೃತ್ತಿ ನಂ-95/ಬಿ, 38 ಕ್ರಾಸ್, 2 ನೇ ವಿಭಾಗ, ರಾಜಾಜಿ ನಗರ, ಬೆಂಗಳೂರು-560010 ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ ತಮ್ಮ ಅಣ್ಣ ಶ್ರೀ.ಉಗೇಶ್ 35 ವರ್ಷ, ಖಾಸಗೀ ಕಂಪನಿಯಲ್ಲಿ ಇಂಜಿನಿಯರಿಂಗ್ ವೃತ್ತಿ ರವರು ತಮ್ಮ ಕಂಪನಿವತಿಯಿಂದ ನೀಡುವ ತರಬೇತಿಗಾಗಿ ದಿನಾಂಕ:-16/05/2021 ರಂದು ಬೆಂಗಳೂರಿನ ರಾಜಾಜಿನಗರದಿಂದ ತಮ್ಮ KA-02-JU-2520 ರ ರಾಯಲ್ ಎನ್ಫೀಲ್ಡ್ ದ್ವಿಚಕ್ರವಾಹನವನ್ನು ಚಾಲನೆ ಮಾಡಿಕೊಂಡು ಅನಂತಪುರಕ್ಕೆ ಹೋಗಿರುತ್ತಾರೆ. ದಿನಾಂಕ:-22/05/2021 ರಂದು ತುರ್ತು ಕೆಲಸದ ನಿಮಿತ್ತ ಅನಂತಪುರದಿಂದ ವಾಪಸ್ಸು ಮನೆಗೆ ಬರಲು ಹೈದ್ರಬಾದ್ - ಬೆಂಗಳೂರು ಎನ್.ಹೆಚ್-44 ಬೈಪಾಸ್ ರಸ್ತೆಯ ಚಿಕ್ಕಬಳ್ಳಾಪುರ ತಾಲ್ಲೂಕಿನ ಬನ್ನಿಕುಪ್ಪೆ ಗೇಟ್ ಬಳಿ ಬೆಳಗಿನ ಜಾವ ಸುಮಾರು 05-00 ಗಂಟೆಯ ಸಮಯದಲ್ಲಿ KA-02-JU-2520 ರ ರಾಯಲ್ ಎನ್ಫೀಲ್ಡ್ ದ್ವಿಚಕ್ರವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಸ್ತೆಗೆ ಅಡ್ಡವಾಗಿ ಬಂದ ನಾಯಿಯನ್ನು ತಪ್ಪಿಸಲು ದ್ವಿಚಕ್ರವಾಹನವನ್ನು ಎಡಭಾಗಕ್ಕೆ ತಿರುಗಿಸಿದಾಗ ವಾಹನದ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದಲ್ಲಿನ ಡಿವೈಡರ್ ಗೆ ಡಿಕ್ಕಿ ಹೊಡೆಸಿ ರಸ್ತೆಯ ಎಡಭಾಗದಲ್ಲಿನ ಹಳ್ಳಿದಲ್ಲಿ ಬಿದ್ದಾಗ ತಮ್ಮ ಅಣ್ಣ ಉಗೇಶ್ ರವರಿಗೆ ಎಡಕಾಲಿಗೆ ರಕ್ತ ಗಾಯವಾಗಿ ಬಲ ಕಾಲಿಗೆ ತರಚಿದ ಗಾಯಗಳಾಗಿ ಅಲ್ಲಿನ ಸ್ಥಳೀಯರು ಅವರನ್ನು ಉಪಚರಿಸಿ ಅಲ್ಲಿಗೆ ಬಂದ 108 ಆಂಬ್ಯೂಲೆನ್ಸ್ ವಾಹನದಲ್ಲಿ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸೇರಿಸುತ್ತಿರುವುದಾಗಿ ಪಿರ್ಯಾಧಿದಾರರಿಗೆ ಮೊಬೈಲ್ ಕರೆ ಮಾಡಿ ತಿಳಿಸಿದ್ದು ತಾನು ಚಿಕ್ಕಬಳ್ಳಾಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬಂದು ನೋಡಲಾಗಿ ವಿಷಯ ನಿಜವಾಗಿದ್ದು ತಮ್ಮ ಅಣ್ಣ ಶ್ರೀ.ಉಗೇಶ್ ರವರಿಗೆ ಹೆಚ್ಚಿನ ಗಾಯಗಳಾಗಿದ್ದರಿಂದ ವೈಧ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸಿಟಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು ಸದರಿ ಅಪಘಾತಕ್ಕೆ ಕಾರಣನಾದ KA-02-JU-2520 ರ ರಾಯಲ್ ಎನ್ಫೀಲ್ಡ್ ರ ದ್ವಿಚಕ್ರವಾಹನ ಸವಾರನ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲು ಕೋರಿ ನೀಡಿದ ದೂರಿನ ಮೇರೆಗೆ ಪ್ರಕರಣವನ್ನು ದಾಖಲಸಿಕೊಂಡಿರುತ್ತೆ.

 

3. ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣೆ ಮೊ.ಸಂ.230/2021 ಕಲಂ. 269,270,188 ಐ.ಪಿ.ಸಿ & 51(b) THE DISASTER MANAGEMENT ACT, 2005 :-

          ದಿನಾಂಕ: 22/05/2021 ರಂದು ಬೆಳಿಗ್ಗೆ 10.30 ಗಂಟೆಗೆ ಠಾಣೆಯ ಶ್ರೀ.ರಾಜು, ಸಿ.ಹೆಚ್.ಸಿ-136 ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಈ ದಿನ ದಿನಾಂಕ: 22/05/2021 ರಂದು ಬೆಳಗ್ಗೆ 09.00 ಗಂಟೆ ಸಮಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ತಾನು ಮತ್ತು ಸಿ.ಪಿ.ಸಿ-516 ವಿಶ್ವನಾಥ್.ಎಸ್.ಎನ್ ರವರು ಠಾಣಾ ಸರಹದ್ದಿನಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ಕವಲಗಾನಹಳ್ಳಿ ಗ್ರಾಮದ ವೆಂಕಟಪ್ಪ ಬಿನ್ ಲೇಟ್ ರಾಮಪ್ಪ ರವರು ಅವರ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವುದಾಗಿ ಮಾಹಿತಿ ಬಂದಿದ್ದು ಅದರಂತೆ ತಾವು ಬೆಳಗ್ಗೆ 09.15 ಗಂಟೆಗೆ ಕವಲಗಾನಹಳ್ಳಿ ಗ್ರಾಮದ ವೆಂಕಟಪ್ಪ ರವರ ಚಿಲ್ಲರೆ ಅಂಗಡಿಯ ಬಳಿ ಹೋದಾಗ ಸದರಿ ಅಂಗಡಿಯಲ್ಲಿ ಅದರ ಮಾಲೀಕರು ಸರ್ಕಾರದ ಕೋವಿಡ್-19 ಸಾಂಕ್ರಾಮಿಕ ರೋಗದ ಸಂಬಂಧ ಇರುವ ಆದೇಶಗಳನ್ನು ಪಾಲಿಸದೇ, ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್ ರೋಗಾಣು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹಾ ಕಾನೂನು ಬಾಹಿರವಾಗಿ ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು, ಸದರಿ ಅಂಗಡಿಯ ಮಾಲೀಕರ ಹೆಸರು ಮತ್ತು ವಿಳಾಸವನ್ನು ಕೇಳಲಾಗಿ ವೆಂಕಟಪ್ಪ ಬಿನ್ ಲೇಟ್ ರಾಮಪ್ಪ, 45 ವರ್ಷ, ನಾಯಕ ಜನಾಂಗ, ಚಿಲ್ಲರೆ ಅಂಗಡಿ ವ್ಯಾಪಾರ, ವಾಸ: ಕವಲಗಾನಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು ಎಂತ ತಿಳಿಸಿದ್ದು, ಆದ ಕಾರಣ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ, ಅಂತರ ಕಾಯ್ದುಕೊಳ್ಳದೇ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಸದರಿ ಚಿಲ್ಲರೆ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಕೋರಿರುವುದಾಗಿರುತ್ತೆ.

 

4. ಚಿಂತಾಮಣಿ ಗ್ರಾಮಾಂತರ ಪೊಲೀಸ್‌ ಠಾಣೆ ಮೊ.ಸಂ.231/2021 ಕಲಂ. 269,270,188 ಐ.ಪಿ.ಸಿ & 51(b) THE DISASTER MANAGEMENT ACT, 2005 :-

          ದಿನಾಂಕ: 22/05/2021 ರಂದು ಮದ್ಯಾಹ್ನ 12.15 ಗಂಟೆಗೆ ಠಾಣೆಯ ಶ್ರೀ.ರಾಜು, ಸಿ.ಹೆಚ್.ಸಿ-136 ರವರು ಠಾಣೆಗೆ ಹಾಜರಾಗಿ ನೀಡಿದ ದೂರಿನ ಸಾರಾಂಶವೇನೆಂದರೆ, ಈ ದಿನ ದಿನಾಂಕ: 22/05/2021 ರಂದು ಬೆಳಗ್ಗೆ 11.00 ಗಂಟೆ ಸಮಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನಲೆಯಲ್ಲಿ ತಾನು ಮತ್ತು ಸಿ.ಪಿ.ಸಿ 516 ವಿಶ್ವನಾಥ್.ಎಸ್.ಎನ್ ರವರು ಠಾಣಾ ಸರಹದ್ದಿನಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ನಾರಾಯಣಹಳ್ಳಿ ಗ್ರಾಮದ ಸರಸ್ವತಮ್ಮ ಕೊಂ ವೆಂಕಟರವಣಪ್ಪ ರವರು ಅವರ ಚಿಲ್ಲರೆ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವುದಾಗಿ ಮಾಹಿತಿ ಬಂದಿದ್ದು ಅದರಂತೆ ತಾವು ಬೆಳಗ್ಗೆ 11.15 ಗಂಟೆಗೆ ನಾರಾಯಣಹಳ್ಳಿ ಗ್ರಾಮದ ಸರಸ್ವತಮ್ಮ ರವರ ಚಿಲ್ಲರೆ ಅಂಗಡಿಯ ಬಳಿ ಹೋದಾಗ ಸದರಿ ಅಂಗಡಿಯಲ್ಲಿ ಅದರ ಮಾಲೀಕರು ಸರ್ಕಾರದ ಕೋವಿಡ್-19 ಸಾಂಕ್ರಾಮಿಕ ರೋಗದ ಸಂಬಂಧ ಇರುವ ಆದೇಶಗಳನ್ನು ಪಾಲಿಸದೇ, ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕೋವಿಡ್ ರೋಗಾಣು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹಾ ಕಾನೂನು ಬಾಹಿರವಾಗಿ ಸಾಮಾಜಿಕ ಅಂತರವನ್ನು ಮರೆತು ಅಂಗಡಿಯ ಮಾಲೀಕರು ಮಾಸ್ಕ್ ಧರಿಸದೇ ಸರ್ಕಾರದ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದಿದ್ದು, ಸದರಿ ಅಂಗಡಿಯ ಮಾಲೀಕರ ಹೆಸರು ಮತ್ತು ವಿಳಾಸವನ್ನು ಕೇಳಲಾಗಿ ಸರಸ್ವತಮ್ಮ ಕೊಂ ವೆಂಕಟರವಣಪ್ಪ,  35 ವರ್ಷ, ಭೋವಿ ಜನಾಂಗ, ಚಿಲ್ಲರೆ ಅಂಗಡಿ ವ್ಯಾಪಾರ, ವಾಸ: ನಾರಾಯಣಹಳ್ಳಿ ಗ್ರಾಮ, ಚಿಂತಾಮಣಿ ತಾಲ್ಲೂಕು ಎಂತ ತಿಳಿಸಿದ್ದು, ಆದ ಕಾರಣ ಕೋವಿಡ್ ರೋಗಾಣು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎಂದು ತಿಳಿದಿದ್ದರೂ ಸಹ ಮುಖಕ್ಕೆ ಮಾಸ್ಕ್ ಧರಿಸದೇ, ಅಂತರ ಕಾಯ್ದುಕೊಳ್ಳದೇ ಕೋವಿಡ್-19 ಆದೇಶಗಳನ್ನು ಉಲ್ಲಂಘನೆ ಮಾಡಿರುವ ಸದರಿ ಚಿಲ್ಲರೆ ಅಂಗಡಿಯ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಕೋರಿರುವುದಾಗಿರುತ್ತೆ.

 

5. ಗುಡಿಬಂಡೆ ಪೊಲೀಸ್‌ ಠಾಣೆ ಮೊ.ಸಂ.100/2021 ಕಲಂ. 32,34 ಕೆ.ಇ ಆಕ್ಟ್ :-

          ದಿನಾಂಕ:21/05/2021 ರಂದು ಸಂಜೆ 6-30 ಗಂಟೆಯಲ್ಲಿ ಪಿರ್ಯಾದಿದಾರರಾದ ಗುಡಿಬಂಡೆ ಪೊಲೀಸ್ ಠಾಣೆಯ ಎ,ಎಸ್,ಐ ಇಂತಿಯಾಜ್ ರವರು ಠಾಣೆಗೆ ಹಾಜರಾಗಿ ನೀಡಿದ ವರದಿ ದೂರಿನ ಸಾರಾಂಶವೇನೆಂದರೆ ಈ ದಿನ ದಿನಾಂಕ:21/05/2021 ರಂದು ಸಂಜೆ 4-00 ಗಂಟೆಯ ಸಮಯದಲ್ಲಿ ಸಮಯದಲ್ಲಿ ಠಾಣೆಯಲ್ಲಿದ್ದಾಗ ಠಾಣಾ ಕ್ರೈಂ ಸಿಬ್ಬಂದಿ ಆನಂದ ಹೆಚ್,ಸಿ 102 ರವರು ಗುಡಿಬಂಡೆ ತಾಲ್ಲೂಕು ಕರಿಗಾನತಮ್ಮನಹಳ್ಳಿ ಗ್ರಾಮದಲ್ಲಿ ಗಸ್ತು ಮಾಡುತ್ತಿದ್ದಾಗ ಕರಿಗಾನತಮ್ಮನಹಳ್ಳಿ ಗ್ರಾಮದ ಮಮತ ಕೊಂ ಕೃಷ್ಣಾರೆಡ್ಡಿ ರವರು ತನ್ನ ಚಿಲ್ಲರೆ ಅಂಗಡಿಯ ಮುಂಭಾಗ ಅಕ್ರಮವಾಗಿ ಮದ್ಯವನ್ನು ಶೇಖರಿಸಿಕೊಂಡು ಸಾರ್ವಜನಿಕರಿಗೆ ಕಾನೂನು ಬಾಹಿರವಾಗಿ ಮಾರಟ ಮಾಡುತ್ತಿರುವುದಾಗಿ ಬಾತ್ಮಿದಾರರಿಂದ ಖಚಿತ ಮಾಹಿತಿ ಬಂದಿರುವುದಾಗಿ ತಿಳಿಸಿದ್ದು ಸದರಿ ಮಾಹಿತಿಯ ಮೇರೆಗೆ ಸದರಿ ರವರ ಮೇಲೆ ದಾಳಿ ಮಾಡಲು ಠಾಣೆಯಲ್ಲಿದ್ದ ಮ.ಪಿ,ಸಿ 228 ನಾಗರತ್ನಮ್ಮ ರವರನ್ನು ಕರೆದುಕೊಂಡು ಕರಿಗಾನತಮ್ಮನಹಳ್ಳಿ ಗ್ರಾಮಕ್ಕೆ ಬಂದು ಗ್ರಾಮದಲ್ಲಿದ್ದ ಹೆಚ್,ಸಿ 102  ಆನಂದ ಕರೆದುಕೊಂಡು ಗ್ರಾಮದಲ್ಲಿದ್ದ ಪಂಚರನ್ನು ಬರಮಾಡಿಕೊಂಡು ಪಂಚರಿಗೆ ಮಾಹಿತಿ ತಿಳಿಸಿ ದಾಳಿ ಸಮಯದಲ್ಲಿ ಪಂಚರಾಗಿ ಸಹಕರಿಸಲು ಕೋರಿದ್ದು ಅದಕ್ಕೆ ಅವರು ಒಪ್ಪಿಕೊಂಡರು ನಾವು ಬಂದಿದ್ದ ದ್ವಿ ಚಕ್ರವಾಹನವನ್ನು ಮರೆಯಲ್ಲಿ ನಿಲ್ಲಿಸಿ ಪಂಚರೊಂದಿಗೆ ಸಂಜೆ 4-20 ಗಂಟೆಯಲ್ಲಿ ಮಮತ ರವರ ಚಿಲ್ಲರೆ ಅಂಗಡಿಯ ಬಳಿ ಹೋಗಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ದೂರದಲ್ಲಿಯೇ ಸಮವಸ್ತ್ರದಲ್ಲಿದ್ದ ನಮ್ಮನ್ನು ಕಂಡು ಅಕ್ರಮವಾಗಿ ಮದ್ಯವನ್ನು ಮಾರಟ ಮಾಡುತ್ತಿದ್ದ ಮಹಿಳೆಯು ಸ್ಥಳದಲ್ಲಿ ಮದ್ಯವನ್ನು ಬಿಟ್ಟು ಓಡಿ ಹೋಗಿದ್ದು ನಾವುಗಳು ಹಿಡಿದುಕೊಳ್ಳಲು ಪ್ರಯತ್ನಿಸಲಾಗಿ ಸಿಕ್ಕಿರುವುದಿಲ್ಲ. ಮಮತ ರವರ ಚಿಲ್ಲರೆ ಅಂಗಡಿಯ ಮುಂಭಾಗ ಪರಿಶೀಲಿಸಿದಾಗ ಒಂದು ಬಿಳಿ ಪ್ಲಾಸ್ಟಿಕ್ ಚೀಲವಿದ್ದು ಚೀಲವನ್ನು ತೆರೆದು ನೋಡಿದಾಗ ಚೀಲದಲ್ಲಿ 1)ಓರಿಜಿನಲ್ ಚಾಯ್ಸ್ ಡಿಲಕ್ಸ ವೀಸ್ಕಿ ಕಂಪನಿಯ 90 ಎಂ.ಎಲ್. ಸಾಮಥ್ರ್ಯದ  ಮದ್ಯವುಳ್ಳ  33 ಟೆಟ್ರಾ ಪಾಕೇಟ್ಗಳು, ಇದ್ದು ಇದರ ಒಟ್ಟು ಮದ್ಯ 2 ಲೀಟರ್ 970 ಎಂ.ಎಲ್. ಆಗಿದ್ದು ಒಂದು ಟೆಟ್ರಾ ಪಾಕೇಟ್ ನ ಬೆಲೆ 35.13 ರೂಗಳಿದ್ದು ಇದರ ಒಟ್ಟು ಮೌಲ್ಯವು 35.13*33= 1159 ರೂಗಳಾಗಿದ್ದು. 2) ಬ್ಯಾಗ್ ಪೈಪರ್ ಡಿಲಕ್ಸ ವೀಸ್ಕಿ ಕಂಪನಿಯ 180 ಎಂ.ಎಲ್. ಸಾಮಥ್ರ್ಯದ ಮದ್ಯವುಳ್ಳ 04 ಟೆಟ್ರಾ ಪಾಕೇಟ್ಗಳು, ಇದ್ದು ಇದರ ಒಟ್ಟು ಮದ್ಯ 720 ಎಂ.ಎಲ್. ಆಗಿದ್ದು ಒಂದು ಟೆಟ್ರಾ ಪಾಕೇಟ್ ನ ಬೆಲೆ 106.23 ರೂಗಳಿದ್ದು ಇದರ ಒಟ್ಟು ಮೌಲ್ಯವು 106.23* 4=424 ರೂಗಳಾಗಿರುತ್ತೆ. ಚಿಲ್ಲರೆ ಅಂಗಡಿ ಮಾಲೀಕರ ಹೆಸರು ಮತ್ತು ವಿಳಾಸವನ್ನು ತಿಳಿಯಲಾಗಿ ಮಮತ ಕೊಂ ಕೃಷ್ಣಾರೆಡ್ಡಿ 45 ವರ್ಷ , ಚಿಲ್ಲರೆ ಅಂಗಡಿ ವ್ಯಾಪಾರ ವಕ್ಕಲಿಗ ಜನಾಂಗ,  ವಾಸ:ಕರಿಗಾನತಮ್ಮನಹಳ್ಳಿ ಗ್ರಾಮ, ಗುಡಿಬಂಡೆ ತಾಲ್ಲೂಕು ಎಂದು ತಿಳಿಯಿತು. ಸದರಿ ಅಸಾಮಿಯು ಯಾವುದೇ ಪರವಾನಿಗೆ ಇಲ್ಲದೇ ಕಾನೂನು ಬಾಹಿರವಾಗಿ ಮೇಲ್ಕಂಡ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರಿಂದ ನಂತರ ಪಂಚರ ಸಮಕ್ಷಮ ಸ್ಥಳದಲ್ಲಿ ಮೇಲ್ಕಂಡ ಪ್ರತಿ ಐಟಂನಲ್ಲಿ ಒಂದೊಂದನ್ನು ಪ್ರತ್ಯೇಕವಾಗಿ ಬಿಳಿ ಬಟ್ಟೆ ಚೀಲದಲ್ಲಿ ಇಟ್ಟು ಅರಗು ಮಾಡಿ 'ಕ' ಎಂಬ ಅಕ್ಷರದಿಂದ ಸೀಲ್ ಮಾಡಿ ಎಫ್.ಎಸ್.ಎಲ್. ಗೆ ಪರೀಕ್ಷೆಗೆ ಕಳುಹಿಸಿ ಕೊಡಲು ಶೇಖರಿಸಿರುತ್ತೆ. ಸದರಿ ಮಾಲನ್ನು ಸಂಜೆ 4-30 ಗಂಟೆಯಿಂದ 5-30 ಗಂಟೆಯವರೆಗೂ ಪಂಚರ ಸಮಕ್ಷಮ ಜರುಗಿಸಿದ ಪಂಚನಾಮೆ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಸದರಿ ಮಾಲನ್ನು ಅಸಲು ಪಂಚನಾಮೆ ಯೊಂದಿಗೆ ಸಂಜೆ 6-00 ಗಂಟೆಗೆ ಠಾಣೆಗೆ ಬಂದು ವರದಿಯನ್ನು ಸಿದ್ದಪಡಿಸಿ ಸಂಜೆ 6-30 ಗಂಟೆಗೆ ಸದರಿ ಆರೋಪಿತನ ವಿರುದ್ದ ಮುಂದಿನ ಕಾನೂನು ಕ್ರಮ ಕೈಗೊಳ್ಳಲು ಕೋರಿ ನೀಡಿದ ದೂರು.

 

6. ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣೆ ಮೊ.ಸಂ.49/2021 ಕಲಂ. 15(A),32(3) ಕೆ.ಇ ಆಕ್ಟ್ :-

          ದಿನಾಂಕ 21-05-2021 ರಂದು ಮದ್ಯಾಹ್ನ 3.00 ಗಂಟೆಗೆ ಪಿ.ಎಸ್.ಐ ರವರು ಠಾಣೆಗೆ ಹಾಜರಾಗಿ ಹಾಜರುಪಡಿಸಿದ ಮಾಲು, ಮಹಜರ್ ರೊಂದಿಗೆ ನೀಡಿದ ವರದಿಯ ಸಾರಾಂಶವೇನೆಂದರೆ,  ದಿನಾಂಕ:21/05/2021 ರಂದು ಮಧ್ಯಾಹ್ನ 13-00 ಗಂಟೆ ಸಮಯದಲ್ಲಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಕೊಡೇಗಂಡ್ಲು ಗ್ರಾಮದ ಕೃಷ್ಣಪ್ಪ ಬಿನ್ ಲೇಟ್ ಶ್ರೀರಾಮಪ್ಪ ರವರು ತಮ್ಮ ಮನೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಇಲ್ಲದೇ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿರುವ ಬಗ್ಗೆ ಖಚಿತ ಮಾಹಿತಿ ಬಂದಿದ್ದು, ಅದರಂತೆ ಸದರಿ ಸ್ಥಳದ ಮೇಲೆ  ದಾಳಿ ನಡೆಸುವ ಸಲುವಾಗಿ ತಾನು ಸಿಬ್ಬಂದಿಯಾದ ಸಿಪಿಸಿ-101 ಶ್ರೀನಿವಾಸ  ರವರೊಂದಿಗೆ ಸರ್ಕಾರಿ ವಾಹನ ಸಂಖ್ಯೆ ಕೆಎ-40-ಜಿ-539 ಜೀಪ್ ನಲ್ಲಿ ಕೊಡೇಗಂಡ್ಲು ಗ್ರಾಮದ ಬಳಿ ಹೋಗಿ ಅಲ್ಲಿದ್ದವರಿಗೆ ವಿಚಾರವನ್ನು ತಿಳಿಸಿ ಅವರನ್ನು ಪಂಚಾಯ್ತಿದಾರರನ್ನು ಬರಮಾಡಿಕೊಂಡು ಪಂಚರೊಂದಿಗೆ ಗ್ರಾಮದೊಳಗೆ ಹೋಗಿ ವಾಹನವನ್ನು ಮರೆಯಲ್ಲಿ ನಿಲ್ಲಿಸಿ ನಡೆದುಕೊಂಡು ಕೊಡೆಗಂಡ್ಲು ಗ್ರಾಮದ ಕೃಷ್ಣಪ್ಪ ಬಿನ್ ಲೇಟ್ ಶ್ರೀರಾಮಪ್ಪ  ರವರ ಮನೆಯ ಬಳಿ ಹೋಗಿ ನೋಡಲಾಗಿ ಮನೆಯ ಮಾಲೀಕನಾದ ಕೃಷ್ಣಪ್ಪ ತಮ್ಮ ಮನೆಯ ಮುಂದೆ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಪೊಲೀಸರನ್ನು  ಕಂಡ ಕೂಡಲೇ ಮದ್ಯ ಸೇವನೆ ಮಾಡುತ್ತಿರುವವರು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ನೋಡಿ ಓಡಿಹೋಗಿದ್ದು, ಮನೆಯ ಮಾಲೀಕನೂ ಸಹ ಓಡಿ ಹೋಗಿರುತ್ತಾನೆ. ಓಡಿಹೋದ ಆಸಾಮಿಯ ಹೆಸರು ಮತ್ತು ವಿಳಾಸ ಕೇಳಗಾಗಿ  ಕೃಷ್ಣಪ್ಪ ಬಿನ್ ಲೇಟ್ ಶ್ರೀರಾಮಪ್ಪ, 60 ವರ್ಷ, ಅಂಗಡಿ ವ್ಯಾಪಾರ, ಆದಿ ಕರ್ನಾಟಕ ಜನಾಂಗ, ವಾಸ ಕೊಡೇಗಂಡ್ಲು ಗ್ರಾಮ, ಚಿಂತಾಮಣಿ ತಾಲ್ಲೂಕು  ಎಂದು ತಿಳಿಸಿದನು. ಸ್ಥಳದಲ್ಲಿ ಪರಿಶೀಲಿಸಲಾಗಿ ಅಕ್ರಮ ಮಧ್ಯ ಸೇವನೆ ಮಾಡಲು ಬಳಸಿದ್ದ 2 ಪ್ಲಾಸ್ಟಿಕ್ ಗ್ಲಾಸ್ ಗಳು, ಖಾಲಿ ಇದ್ದ ಎರಡು HAYWARDS CHEERS WHISKEY 90 ಎಂ.ಎಲ್ ಟೆಟ್ರಾ ಪ್ಯಾಕೆಟ್ ಇದ್ದು, ಸ್ಥಳದಲ್ಲಿಯೇ  90 ಎಂ.ಎಲ್ ನ HAYWARDS CHEERS WHISKEY ಮಧ್ಯದ 6 ಟೆಟ್ರಾ ಪ್ಯಾಕೆಟ್ ಗಳು ಇದ್ದು, ಒಂದರ ಬೆಲೆ 35.13/- ರೂ  ಆಗಿದ್ದು, 6 ಟೆಟ್ರಾ ಪ್ಯಾಕೆಟ್ ಗಳ ಒಟ್ಟು ಬೆಲೆ 211/-ರೂ ಆಗಿರುತ್ತೆ. ಮದ್ಯ ಒಟ್ಟು 540 ಮೀಲಿ ಆಗಿರುತ್ತೆ. ಮಧ್ಯವನ್ನು ಕುಡಿಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿರುವ ಬಗ್ಗೆ ಯಾವುದೇ ಪರವಾನಗಿ ಇಲ್ಲದೇ ಇರುವುದರಿಂದ ಮನೆಯ ಮಾಲೀಕನಾದ ಕೃಷ್ಣಪ್ಪ ಓಡಿಹೋಗಿರುತ್ತಾನೆ.  ಮೇಲ್ಕಂಡ ಎಲ್ಲಾ ಮಾಲುಗಳನ್ನು ಮಧ್ಯಾಹ್ನ 13-30 ರಿಂದ 14-30 ಗಂಟೆಯವರೆಗೆ ಮಹಜರ್ ಮೂಲಕ ಅಮಾನತ್ತುಪಡಿಸಿಕೊಂಡಿರುತ್ತೆ. ಸದರಿ ಮಾಲನ್ನು ಮಹಜರ್ ನ್ನು,  ನಿಮ್ಮ ಮುಂದೆ ವರದಿ ದೂರಿನೊಂದಿಗೆ ಹಾಜರುಪಡಿಸುತ್ತಿದ್ದು ಈ ಬಗ್ಗೆ ಅಕ್ರಮ ಮದ್ಯ ಕುಡಿಯಲು ಅವಕಾಶ ಮಾಡಿಕೊಟ್ಟ ಕೃಷ್ಣಪ್ಪ ರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ನೀಡಿದ ವರದಿ ಸಾರಾಂಶವಾಗಿರುತ್ತೆ.

 

7. ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣೆ ಮೊ.ಸಂ.50/2021 ಕಲಂ. 15(A),32(3) ಕೆ.ಇ ಆಕ್ಟ್ :-

          ದಿನಾಂಕ 22-05-2021 ರಂದು ಬೆಳಗ್ಗೆ 11.00 ಗಂಟೆಗೆ ಪಿ.ಎಸ್.ಐ ರವರು ಠಾಣೆಗೆ ಹಾಜರಾಗಿ ಹಾಜರುಪಡಿಸಿದ ಮಾಲು, ಮಹಜರ್ ರೊಂದಿಗೆ ನೀಡಿದ ವರದಿಯ ಸಾರಾಂಶವೇನೆಂದರೆ,  ದಿನಾಂಕ:22/05/2021 ರಂದು ಬೆಳಿಗ್ಗೆ 11-00 ಗಂಟೆ ಸಮಯದಲ್ಲಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಕೊಡೇಗಂಡ್ಲು ಗ್ರಾಮದ ನಾರೆಪ್ಪ ಬಿನ್ ಲೇಟ್ ಸುಬ್ಬಣ್ಣ ರವರು ತಮ್ಮ ಮನೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಗಿ ಇಲ್ಲದೇ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿರುವ ಬಗ್ಗೆ ಖಚಿತ ಮಾಹಿತಿ ಬಂದಿದ್ದು, ಅದರಂತೆ ಸದರಿ ಸ್ಥಳದ ಮೇಲೆ  ದಾಳಿ ನಡೆಸುವ ಸಲುವಾಗಿ ತಾನು ಸಿಬ್ಬಂದಿಯಾದ ಸಿಪಿಸಿ-101 ಶ್ರೀನಿವಾಸ  ರವರೊಂದಿಗೆ ಸರ್ಕಾರಿ ವಾಹನ ಸಂಖ್ಯೆ ಕೆಎ-40-ಜಿ-539 ಜೀಪ್ ನಲ್ಲಿ ಕೊಡೇಗಂಡ್ಲು ಗ್ರಾಮದ ಬಳಿ ಹೋಗಿ ಅಲ್ಲಿದ್ದವರಿಗೆ ವಿಚಾರವನ್ನು ತಿಳಿಸಿ ಅವರನ್ನು ಪಂಚಾಯ್ತಿದಾರರನ್ನು ಬರಮಾಡಿಕೊಂಡು ಪಂಚರೊಂದಿಗೆ ಗ್ರಾಮದೊಳಗೆ ಹೋಗಿ ವಾಹನವನ್ನು ಮರೆಯಲ್ಲಿ ನಿಲ್ಲಿಸಿ ನಡೆದುಕೊಂಡು ಕೊಡೆಗಂಡ್ಲು ಗ್ರಾಮದ ನಾರೆಪ್ಪ ಬಿನ್ ಲೇಟ್ ಸುಬ್ಬಣ್ಣ ರವರ ಮನೆಯ ಬಳಿ ಹೋಗಿ ನೋಡಲಾಗಿ ಮನೆಯ ಮಾಲೀಕನಾದ ನಾರೆಪ್ಪ ತಮ್ಮ ಮನೆಯ ಮುಂದೆ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದು, ಪೊಲೀಸರನ್ನು  ಕಂಡ ಕೂಡಲೇ ಮದ್ಯ ಸೇವನೆ ಮಾಡುತ್ತಿರುವವರು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ನೋಡಿ ಓಡಿಹೋಗಿದ್ದು, ಮನೆಯ ಮಾಲೀಕನೂ ಸಹ ಓಡಿ ಹೋಗಿರುತ್ತಾನೆ. ಓಡಿಹೋದ ಆಸಾಮಿಯ ಹೆಸರು ಮತ್ತು ವಿಳಾಸ ಕೇಳಗಾಗಿ  ನಾರೆಪ್ಪ ಬಿನ್ ಲೇಟ್ ಸುಬ್ಬಣ್ಣ, 62 ವರ್ಷ, ಅಂಗಡಿ ವ್ಯಾಪಾರ, ಗೊಲ್ಲ ಜನಾಂಗ, ವಾಸ ಕೊಡೇಗಂಡ್ಲು ಗ್ರಾಮ, ಚಿಂತಾಮಣಿ ತಾಲ್ಲೂಕು  ಎಂದು ತಿಳಿಯಿತು.  ಸ್ಥಳದಲ್ಲಿ ಪರಿಶೀಲಿಸಲಾಗಿ ಅಕ್ರಮ ಮಧ್ಯ ಸೇವನೆ ಮಾಡಲು ಬಳಸಿದ್ದ 2 ಪ್ಲಾಸ್ಟಿಕ್ ಗ್ಲಾಸ್ ಗಳು, ಖಾಲಿ ಇದ್ದ ಎರಡು HAYWARDS CHEERS WHISKEY 90 ಎಂ.ಎಲ್ ಟೆಟ್ರಾ ಪ್ಯಾಕೆಟ್ ಇದ್ದು, ಸ್ಥಳದಲ್ಲಿಯೇ  90 ಎಂ.ಎಲ್ ನ HAYWARDS CHEERS WHISKEY ಮಧ್ಯದ 10 ಟೆಟ್ರಾ ಪ್ಯಾಕೆಟ್ ಗಳು ಇದ್ದು, ಒಂದರ ಬೆಲೆ 35.13/- ರೂ  ಆಗಿದ್ದು, 10 ಟೆಟ್ರಾ ಪ್ಯಾಕೆಟ್ ಗಳ ಒಟ್ಟು ಬೆಲೆ 351/-ರೂ ಆಗಿರುತ್ತೆ. ಮದ್ಯ ಒಟ್ಟು 900 ಮೀಲಿ ಆಗಿರುತ್ತೆ. ಮಧ್ಯವನ್ನು ಕುಡಿಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಟ್ಟಿರುವ ಬಗ್ಗೆ ಯಾವುದೇ ಪರವಾನಗಿ ಇಲ್ಲದೇ ಇರುವುದರಿಂದ ಮನೆಯ ಮಾಲೀಕನಾದ ನಾರೆಪ್ಪ ಓಡಿಹೋಗಿರುತ್ತಾನೆ.  ಮೇಲ್ಕಂಡ ಎಲ್ಲಾ ಮಾಲುಗಳನ್ನು ಬೆಳಿಗ್ಗೆ 11-30 ರಿಂದ ಮಧ್ಯಾಹ್ನ 12-30 ಗಂಟೆಯವರೆಗೆ ಮಹಜರ್ ಮೂಲಕ ಅಮಾನತ್ತುಪಡಿಸಿಕೊಂಡಿರುತ್ತೆ. ಸದರಿ ಮಾಲನ್ನು, ಮಹಜರ್ ನ್ನು ನಿಮ್ಮ ಮುಂದೆ ವರದಿ ದೂರಿನೊಂದಿಗೆ ಹಾಜರುಪಡಿಸುತ್ತಿದ್ದು ಈ ಬಗ್ಗೆ ಅಕ್ರಮ ಮದ್ಯ ಕುಡಿಯಲು ಅವಕಾಶ ಮಾಡಿಕೊಟ್ಟ ನಾರೆಪ್ಪ ರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ನೀಡಿದ ವರದಿ ಸಾರಾಂಶವಾಗಿರುತ್ತೆ.

ಇತ್ತೀಚಿನ ನವೀಕರಣ​ : 22-05-2021 04:58 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080